ಪುಣೆ: ವಿಶ್ವಕಪ್ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ. ಬಾಂಗ್ಲಾದೇಶ ಉತ್ತಮ ಆರಂಭ ಪಡೆದಿದೆ. 12 ಓವರ್ನಲ್ಲಿ ವಿಕೆಟ್ ನಷ್ಟವಿಲ್ಲದೆ 72 ರನ್ ಗಳಿಸಿದೆ.
ವಿಶ್ವಕಪ್ ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಜಯಗಳಿಸಿರುವ ಭಾರತ ತಂಡವು
ಬಾಂಗ್ಲಾದೇಶ ತಂಡದ ವಿರುದ್ಧ ಸತತ ನಾಲ್ಕನೇ ಗೆಲುವು ದಾಖಲಿಸುವ ಉತ್ಸಾಹದಲ್ಲಿದೆ. ಶುಕ್ರವಾರ ನ್ಯೂಝಿಲ್ಯಾಂಡ್ ತಂಡದೆದುರು ನಡೆದಿದ್ದ ಪಂದ್ಯದಲ್ಲಿ ಗಾಯಗೊಂಡಿದ್ದ ನಾಯಕ ಶಾಕಿಬ್ ಅಲ್ ಹಸನ್ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಅನುಪಸ್ಥಿತಿಯಲ್ಲಿ ಶಂತೊ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.
ಭಾರತ ತಂಡವು ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗಗಳೆರಡಲ್ಲೂ ಪರಿಣಾಮಕಾರಿ ಪ್ರದರ್ಶನ ನೀಡುತ್ತಿದ್ದು, ಅದೇ ತಂಡವನ್ನು ಕೇಕ್ ಕ ಇಳಿಸಿದೆ.