ಫ್ಲಾರಿಡಾ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಭಾರತ ಹಾಗೂ ಕೆನಡಾ ನಡುವಣ ಪಂದ್ಯ ಒಂದೂ ಎಸೆತವನ್ನು ಕಾಣದೇ ರದ್ದುಗೊಂಡಿದೆ.ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಮೈದಾನ ತೇವಗೊಂಡಿತ್ತು. ಹಲವು ಸಲ ಮೈದಾನ ಪರಿಶೀಲಿಸಿದ ಅಂಪೈರ್ಗಳು ಅಂತಿಮವಾಗಿ
ಪಂದ್ಯವನ್ನು ಕೈಬಿಡಲು ನಿರ್ಧರಿಸಿದರು.ಇದಕ್ಕೆ ಇತ್ತಂಡಗಳ ನಾಯಕರು ಒಪ್ಪಿಗೆ ಸೂಚಿಸಿದರು. ಇದರಿಂದಾಗಿ ಟಾಸ್ ಕೂಡ ಕಾಣದೇ ಪಂದ್ಯವನ್ನು ರದ್ದುಗೊಳಿಸಲಾಗಿದೆ.ಇತ್ತಂಡಗಳಿಗೆ ಸಮಾನ ಒಂದು ಅಂಕವನ್ನು ಹಂಚಿಕೊಳ್ಳಲಾಗಿದೆ. ಇದರೊಂದಿಗೆ ‘ಎ’ ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಟೀಮ್ ಇಂಡಿಯಾ ಸೂಪರ್ ಎಂಟರ ಹಂತಕ್ಕೆ ಪ್ರವೇಶಿಸಿದೆ.ರೋಹಿತ್ ಶರ್ಮಾ ಬಳಗವು ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವಿನೊಂದಿಗೆ ಒಟ್ಟು ಏಳು ಅಂಕಗಳನ್ನು ಕಲೆ ಹಾಕಿದೆ.ಇದೇ ಗುಂಪಿನಲ್ಲಿ ನಾಲ್ಕು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿರುವ ಅಮೆರಿಕ, ಒಟ್ಟು ಐದು ಅಂಕಗಳೊಂದಿಗೆ ಎರಡನೇ ತಂಡವಾಗಿ ಮುಂದಿನ ಹಂತಕ್ಕೆ ಪ್ರವೇಶಿಸಿದೆ.ಪಾಕಿಸ್ತಾನ ಹಾಗೂ ಐರ್ಲೆಂಡ್ ತಂಡಗಳು ನಿರ್ಗಮಿಸಿವೆ. ಇತ್ತಂಡಗಳು ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.