ಲಖನೌ: ಭಾರತ ತಂಡವು ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ತವರಿನಂಗಳದಲ್ಲಿ ರೋಹಿತ್ ಬಳಗವು ಅಮೋಘ ಆಟವಾಡುತ್ತಿದ್ದು ಮೊದಲ 5 ಪಂದ್ಯಗಳನ್ನು ಗೆದ್ದು ಬೀಗಿದೆ.ರೋಹಿತ್ ಶರ್ಮಾ, ಯುವ ಆಟಗಾರ ಶುಭಮನ್ ಗಿಲ್ ಅವರಿಂದ ಉತ್ತಮ ಆರಂಭ
ದೊರೆಯುತ್ತಿದೆ.
ಇಂಗ್ಲೆಂಡ್ ತಂಡದ ಬೌಲರ್ಗಳಿಗೆ ನಿಜಕ್ಕೂ ದೊಡ್ಡ ಸವಾಲೆಂದರೆ ವಿರಾಟ್ ಕೊಹ್ಲಿಯನ್ನು ಕಟ್ಟಿಹಾಕುವುದು. ವಿರಾಟ್ ಇದುವರೆಗೆ ಒಟ್ಟು 354 ರನ್ಗಳನ್ನು ಪೇರಿಸಿದ್ದಾರೆ. ಕಳೆದ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಅವರು 95 ರನ್ ಗಳಿಸಿದ್ದರು. ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ ಕೂಡ ಉತ್ತಮ ಲಯದಲ್ಲಿದ್ದಾರೆ. ಆದರೆ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಅವರಿಗೆ ಅವಕಾಶ ಸಿಗಬಹುದು. ಇನ್ನೊಂದೆಡೆ ಜಾನಿ ಬೆಸ್ಟೊ, ಡೇವಿಡ್ ಮಲಾನ್, ಜೋ ರೂಟ್ ಮತ್ತು ಬೆನ್ ಸ್ಟೋಕ್ಸ್ ಅವರನ್ನು ಒಳಗೊಂಡ ಬಲಿಷ್ಠ ಬ್ಯಾಟಿಂಗ್ ಹೊಂದಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ಈ ಬಾರಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ.
ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜ, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಆರ್. ಅಶ್ವಿನ್.
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ–ವಿಕೆಟ್ಕೀಪರ್), ಜಾನಿ ಬೆಸ್ಟೊ, ಡೇವಿಡ್ ಮಲಾನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಡೇವಿಡ್ ವಿಲಿ, ಆದಿಲ್ ರಶೀದ್, ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಮಾರ್ಕ್ ವುಡ್, ಬ್ರೈಡನ್ ಕೇರ್ಸ್, ಮೋಯಿನ್ ಆಲಿ, ಲಿಯಾಮ್ ಲಿವಿಂಗ್ಸ್ಟೋನ್, ಸ್ಯಾಮ್ ಕರನ್.
ಪಂದ್ಯ ಆರಂಭ: ಮಧ್ಯಾಹ್ನ 2
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್, ಹಾಟ್ಸ್ಟಾರ್ ಆ್ಯಪ್