ಧರ್ಮಶಾಲಾ: ಏಕದಿನ ವಿಶ್ವಕಪ್ನಲ್ಲಿ ಅ.22ರಂದು ಭಾರತ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅಲಭ್ಯರಾಗಲಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಪಾದಕ್ಕೆ ಗಾಯಗೊಂಡಿರುವ ಪಾಂಡ್ಯ ನ್ಯೂಜಿಲೆಂಡ್ ವಿರುದ್ಧ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ವಿಶ್ವಕಪ್ನ
ಎರಡು ಅಜೇಯ ತಂಡಗಳಾದ ಭಾರತ ಮತ್ತು ನ್ಯೂಜಿಲೆಂಡ್ ಮಧ್ಯೆ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಧರ್ಮಶಾಲಾ ಕ್ರೀಡಾಂಗಣದಲ್ಲಿ ಭಾನುವಾರ ಮುಖಾಮುಖಿಯಾಗಲಿವೆ. ಇದರಲ್ಲಿ ಯಾರು ಗೆಲ್ಲುತ್ತಾರೆ ಎಂಬ ಕುತೂಹಲ ಮೂಡಿದೆ.
ಉತ್ತಮ ಫಾರ್ಮ್ನಲ್ಲಿರುವ ಭಾರತ ಅಜೇಯವಾಗಿದೆ. ನ್ಯೂಜಿಲೆಂಡ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಆಡಿರುವ ಎಲ್ಲಾ 4 ಪಂದ್ಯಗಳನ್ನು ಎರಡೂ ತಂಡಗಳು ಗೆದ್ದಿದೆ. ರನ್ ರೇಟ್ ಆಧಾರದಲ್ಲಿ ನ್ಯೂಝಿಲೆಂಡ್ ಅಗ್ರ ಸ್ಥಾನದಲ್ಲಿದೆ. ಈ ಹಿಂದಿನ ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತ ತಂಡವನ್ನು ಸೋಲಿಸಿತ್ತು.ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಅಲಭ್ಯತೆಯಲ್ಲಿ ತಂಡದ ಸಂಯೋಜನೆ ಹೇಗಿರಲಿದೆ ಎಂಬ ಕುತೂಹಲ ಇದೆ. ಹೊಸ ಸಂಯೋಜನೆ ರೂಪಿಸುವುದು ಅನಿವಾರ್ಯವಾಗಿದೆ. ಶಮಿ ಅವರನ್ನು ಆಡಿಸುವ ಆಯ್ಕೆ ತಂಡದ ಮುಂದಿದೆ. ಬ್ಯಾಟಿಂಗ್ ಬಲಪಡಿಸಲು ಸೂರ್ಯಕುಮಾರ್ ಯಾದವ್ ಅವರನ್ನೂ ಆಡಿಸುವ ಸಾಧ್ಯತೆ ಇದೆ. ಆಗ ಶಾರ್ದೂಲ್ ಠಾಕೂರ್ ಅವರನ್ನು ಕೈ ಬಿಡಬೇಕಾಗಬಹುದು.
ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮ, ಶುಭಮನ್ ಗಿಲ್, ಕೆ.ಎಲ್.ರಾಹುಲ್ ಉತ್ತಮ ಫಾರ್ಮ್ನಲ್ಲಿದ್ದಾರೆ.ಬೌಲಿಂಗ್ನಲ್ಲಿ ಜಸ್ಪ್ರೀತ್ ಬೂಮ್ರಾ, ಕುಲದೀಪ್ ಯಾದವ್, ಮಹಮ್ಮದ್ ಸಿರಾಜ್, ರವೀಂದ್ರ ಜಡೇಜ ಅಪಾರ ಫಾರ್ಮ್ನಲ್ಲಿದ್ದಾರೆ.ನ್ಯೂಝಿಲೆಂಡ್ನ ಡೆವಾನ್ ಕಾನ್ವೆ, ರಚಿನ್ ರವೀಂದ್ರ, ಡೇರಿಲ್ ಮಿಚೆಲ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.
ತಂಡಗಳು:
ಭಾರತ: ರೋಹಿತ್ ಶರ್ಮಾ (ನಾಯಕ), ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರವೀಂದ್ರ ಜಡೇಜ, ಆರ್.ಅಶ್ವಿನ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್.
ನ್ಯೂಜಿಲೆಂಡ್:ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವಾನ್ ಕಾನ್ವೆ, ಲಾಕಿ ಫರ್ಗ್ಯೂಸನ್, ಮ್ಯಾಟ್ ಹೆನ್ರಿ, ಟಾಮ್ ಲಥಾಮ್ (ನಾಯಕ– ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಜಿಮ್ಮಿ ನೀಷಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಈಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.
ಪಂದ್ಯ ಆರಂಭ: ಮಧ್ಯಾಹ್ನ 2
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್