ಧರ್ಮಶಾಲಾ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಭಾರತ ತಂಡದಲ್ಲಿ ಪ್ರಮುಖವಾಗಿ ಎರಡು ಬದಲಾವಣೆಗಳನ್ನು
ತರಲಾಗಿದೆ. ಗಾಯಾಳು ಹಾರ್ದಿಕ್ ಪಾಂಡ್ಯ ಆಡುತ್ತಿಲ್ಲ. ಶಾರ್ದೂಲ್ ಠಾಕೂರ್ ಅವರನ್ನಿ ಕೈ ಬಿಡಲಾಗಿದೆ. ಅವರ ಬದಲಿಗೆ ಮೊಹಮ್ಮದ್ ಶಮಿ ಹಾಗೂ ಸೂರ್ಯಕುಮಾರ್ ಯಾದವ್ಗೆ ಸ್ಥಾನ ಕಲ್ಪಿಸಲಾಗಿದೆ.ಮತ್ತೊಂದೆಡೆ ನ್ಯೂಜಿಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ.
ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜ, ಕುಲದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಸಿರಾಜ್.
ನ್ಯೂಜಿಲೆಂಡ್: ಟಾಮ್ ಲೇಥಮ್ (ನಾಯಕ), ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡ್ಯಾರಿಯಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮ್ಯಾನ್, ಮಿಚೆಲ್ ಸ್ಯಾಂಟನರ್, ಮ್ಯಾಟ್ ಹೆನ್ರಿ, ಲೂಕಿ ಫರ್ಗ್ಯೂಸನ್, ಟ್ರೆಂಟ್ ಬೌಲ್ಟ್.