ಕೊಲಂಬೊ: ಏಷ್ಯಾಕಪ್ ಸೂಪರ್-4ನ ನಾಲ್ಕನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಇಂದು ದಸನ್ ಶನುಕಾ ನಾಯಕತ್ವದ ಶ್ರೀಲಂಕಾವನ್ನು ಎದುರಿಸಲಿದೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 228 ರನ್ಗಳ ಭರ್ಜರಿ ಜಯ ಸಾಧಿಸಿತು. ಇದರ ಬೆನ್ನಲ್ಲೇ ಇಂದು ಮತ್ತೊಂದು ಮಹತ್ವದ ಪಂದ್ಯಕ್ಕೆ ರೋಹಿತ್ ಪಡೆ ಸಜ್ಜಾಗಿದೆ.
ಟೀಮ್ ಇಂಡಿಯಾ ಬ್ಯಾಟಿಂಗ್ – ಬೌಲಿಂಗ್ನಲ್ಲಿ ಆಟಗಾರರು
ಫಾರ್ಮ್ನಲ್ಲಿದ್ದಾರೆ. ಓಪನರ್ಗಳಾದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಅರ್ಧಶತಕ ಸಿಡಿಸಿ ಮಿಂಚಿದ್ದರು. ವಿರಾಟ್ ಕೊಹ್ಲಿ ಹಾಗೂ ಇಂಜುರಿಯಿಂದ ಕಮ್ಬ್ಯಾಕ್ ಮಾಡಿದ ಕೆಎಲ್ ರಾಹುಲ್ ಆಕರ್ಷಕ ಶತಕ ಸಿಡಿಸಿ ಅಬ್ಬರಿಸಿದ್ದರು. ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ ಕೂಡ ಫಾರ್ಮ್ನಲ್ಲಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಬ್ಯಾಟಿಂಗ್ ಲೈನ್-ಅಪ್ ಬಲಿಷ್ಠವಾಗಿದೆ.
ಬೌಲಿಂಗ್ನಲ್ಲಿ ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್ ಶಾರ್ದೂಲ್ ಥಾಕೂರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಮತ್ತು ಕುಲ್ದೀಪ್ ಯಾದವ್ ಉತ್ತಮ ಲಯದಲ್ಲಿದ್ದಾರೆ. ಇಂದಿನ ಪಂದ್ಯಕ್ಕೆ ಪಾಕ್ ವಿರುದ್ಧ ಗೆದ್ದ ತಂಡದ ಆಟಗಾರರೇ ಕಣಕ್ಕಿಳಿಯಲಿದ್ದಾರೆ.
ಶ್ರೀಲಂಕಾ ತಂಡ ಕೂಡ ಬ್ಯಾಟಿಂಗ್ – ಬೌಲಿಂಗ್ನಲ್ಲಿ ಬಲಿಷ್ಠವಾಗಿದೆ. ಪಾತುಮ್ ನಿಸ್ಸಾನಕ, ಕುಸಲ್ ಮೆಂಡಿಸ್, ಸದೀರ ಸಮರವಿಕ್ರಮ ಉತ್ತಮ ಲಯದಲ್ಲಿದ್ದಾರೆ. ಶ್ರೀಲಂಕಾ ಬೌಲಿಂಗ್ ವಿಭಾಗದಲ್ಲಿ ಮಹೇಶ್ ತೀಕ್ಷಣ ಮತ್ತು ಮಥೀಶ ಪತಿರಣ ಉತ್ತಮ ಫಾರ್ಮ್ನಲ್ಲಿದ್ದಾರೆ.