ಮುಂಬೈ: ವಿಶ್ವಕಪ್ ಹಣಾಹಣಿಯಲ್ಲಿ ಇಂದು ಭಾರತ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಮುಂಬೈ ವಾಂಖೆಡೆ ಸ್ಟೇಡಿಯಂನಲ್ಲಿ ಮಧ್ಯಾಹ್ನದ ಬಳಿಕ 2 ರಿಂದ ಪಂದ್ಯ ಆರಂಭಗೊಳ್ಳಲಿದೆ.
ಆತಿಥೇಯ ತಂಡ ಇದುವರೆಗೆ ಆಡಿದ ಆರು ಲೀಗ್ ಪಂದ್ಯಗಳಲ್ಲಿ ಗೆದ್ದರೆ ಶ್ರೀಲಂಕಾ ಗೆದ್ದಿರುವುದಕ್ಕಿಂತ ಸೋತಿದ್ದೇ ಜಾಸ್ತಿ. ಆಡಿರುವ ಆರು
ಪಂದ್ಯಗಳ ಪೈಕಿ ಎಲ್ಲ ಆರು ಮ್ಯಾಚ್ಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಏಳನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇಂದಿನ ಮ್ಯಾಚ್ ಗೆದ್ದರೆ ಅಧಿಕೃತವಾಗಿ ಸೆಮಿ ಫೈನಲ್ಗೆ ಏರಲಿದೆ. ಇತ್ತ ಶ್ರೀಲಂಕಾ ಬಹುತೇಕ ಟೂರ್ನಿಯಿಂದ ಹೊರಬಿದ್ದಾಗಿದೆ. ಶುಭ್ಮನ್ ಗಿಲ್ ನಿರೀಕ್ಷಿತ ಪ್ರದರ್ಶನ ನೀಡುತ್ತಿಲ್ಲ. ಶ್ರೇಯಸ್ ಅಯ್ಯರ್ ಸಂಪೂರ್ಣ ವಿಫಲರಾಗಿದ್ದಾರೆ. ನಾಯಕ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಅವರ ಮೇಲೆ ಬ್ಯಾಟಿಂಗ್ ಅವಲಂಬಿತವಾಗಿದೆ.
ಸೂರ್ಯಕುಮಾರ್ ಹಾಗೂ ಕೆಎಲ್ ರಾಹುಲ್ ಲಯದಲ್ಲಿದ್ದಾರೆ. ಭಾರತದ ಎಲ್ಲ ಬೌಲರ್ಗಳು ಭರ್ಜರಿ ಫಾರ್ಮ್ನಲ್ಲಿದ್ದಾರೆ. ಹಾರ್ದಿಕ್ ಪಾಂಡ್ಯ ಇಂದಿನ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.
ಇತ್ತ ಶ್ರೀಲಂಕಾ ಆಡಿರುವ ಆರು ಪಂದ್ಯಗಳ ಪೈಕಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ. 4 ಅಂಕದೊಂದಿಗೆ ಏಳನೇ ಸ್ಥಾನದಲ್ಲಿದೆ. ಏಷ್ಯಾಕಪ್ನಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಶ್ರೀಲಂಕಾ ವಿಶ್ವಕಪ್ನಲ್ಲಿ ಸಂಪೂರ್ಣ ಮಂಕಾಗಿದೆ. ಜೊತೆಗೆ ದಸುನ್ ಶನಕಾ, ಹಸರಂಗ ಅಂತಹ ಸ್ಟಾರ್ ಆಟಗಾರರ ಅಲಭ್ಯತೆ ಎದ್ದು ಕಾಣುತ್ತಿದೆ.
ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.
ಶ್ರೀಲಂಕಾ: ಪಾತುಮ್ ನಿಸಂಕ, ಕುಸಾಲ್ ಪೆರೇರಾ, ಕುಸಲ್ ಮೆಂಡಿಸ್ (ನಾಯಕ/ವಿಕೆಟ್ ಕೀಪರ್) ಸದಿರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ್ ಡಿ ಸಿಲ್ವಾ, ಏಂಜೆಲೊ ಮ್ಯಾಥ್ಯೂಸ್, ಮಹೇಶ್ ತಿಕ್ಷಣ, ಕಸುನ್ ರಜಿತಾ, ದುಷ್ಮಂತ ಚಮೀರಾ, ದಿಲ್ಶನ್ ಮಧುಶಂಕ.