ಅಹಮ್ಮದಾಬಾದ್:2025 ರ ಏಷ್ಯಾಕಪ್ನಲ್ಲಿ ಚಾಂಪಿಯನ್ ಪಟ್ಟಕ್ಕೇರಿರುವ ಟೀಂ ಇಂಡಿಯಾ ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲು ಸಜ್ಜಾಗಿದೆ. ಈ ಸರಣಿಯು ಇಂದಿನಿಂದ (ಅಕ್ಟೋಬರ್ 2 ರಿಂದ) ಅಹ್ಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ದೃಷ್ಟಿಯಿಂದ ಈ ಸರಣಿಯು
ಟೀಂ ಇಂಡಿಯಾಕ್ಕೆ ನಿರ್ಣಾಯಕವಾಗಿದೆ. ಶುಭ್ಮನ್ ಗಿಲ್ ಟೆಸ್ಟ್ ನಾಯಕನಾಗಿ ತಮ್ಮ ಮೊದಲ ಟೆಸ್ಟ್ ಸರಣಿ ಗೆಲುವನ್ನು ಗೆಲ್ಲುವ ಗುರಿಯೊಂದಿಗೆ ತಂಡದೊಂದಿಗೆ ಕಣಕ್ಕಿಳಿಯುತ್ತಿದ್ದಾರೆ.
ವೆಸ್ಟ್ ಇಂಡೀಸ್ ತಂಡವು 7 ವರ್ಷಗಳ ನಂತರ ಟೆಸ್ಟ್ ಸರಣಿಯನ್ನು ಆಡಲು ಭಾರತಕ್ಕೆ ಬಂದಿದೆ. ಇದಕ್ಕೂ ಮೊದಲು 2018 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ವಿಂಡೀಸ್ ಪಡೆ ಭಾರತದ ಎದುರು 2-0 ಅಂತರದಿಂದ ಸರಣಿಯನ್ನು ಸೋತಿತ್ತು. ಟೆಸ್ಟ್ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 9:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ಪ್ರಸಾರ ಮಾಡಲಾಗುತ್ತದೆ. ಜಿಯೋಹಾಟ್ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್ಸೈಟ್ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.
ತಂಡಗಳು:
ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ರವೀಂದ್ರ ಜಡೇಜಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಎನ್. ಜಗದೀಸನ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್. ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ವೆಸ್ಟ್ ಇಂಡೀಸ್ ತಂಡ: ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್ (ಉಪನಾಯಕ), ಕೆವಲನ್ ಆಂಡರ್ಸನ್, ಅಲಿಕ್ ಅಥನಾಜೆ, ಜಾನ್ ಕ್ಯಾಂಪ್ಬೆಲ್, ತೇಜ್ನರೇನ್ ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಜಡ್ಡಿಯಾ ಬ್ಲೇಡ್ಸ್, ಜೋಹಾನ್ ಲೈನ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ, ಜೇಡನ್ ಸೀಲ್ಸ್.












