ಹರಾರೆ: ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಇಂದಿನಿಂದ ಶುರುವಾಗಲಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಸಂಜೆ 4.30 ರಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಯುವ ಆಟಗಾರ ಶುಭ್ಮನ್ ಗಿಲ್ ಮುನ್ನಡೆಸಲಿದ್ದಾರೆ. ಟಿ20 ವಿಶ್ವಕಪ್ ತಂಡದಲ್ಲಿದ್ದ ಬಹುತೇಕ ಆಟಗಾರರಿಗೆ
ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಗೆ ಯಂಗ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಇದೇ ಮೊದಲ ಬಾರಿಗೆ ರಿಯಾನ್ ಪರಾಗ್, ಅಭಿಷೇಕ್ ಶರ್ಮಾ, ಹರ್ಷಿತ್ ರಾಣಾ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇನ್ನು ಟಿ20 ವಿಶ್ವಕಪ್ ತಂಡದಲ್ಲಿ ಮೀಸಲು ಆಟಗಾರರಾಗಿ ಕಾಣಿಸಿಕೊಂಡಿದ್ದ ರಿಂಕು ಸಿಂಗ್ ಹಾಗೂ ಖಲೀಲ್ ಅಹ್ಮದ್ ಈ ಸರಣಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಹಾಗೆಯೇ ಮೂರನೇ ಪಂದ್ಯದ ವೇಳೆ ಸಂಜು ಸ್ಯಾಮ್ಸನ್, ಶಿವಂ ದುಬೆ ಹಾಗೂ ಯಶಸ್ವಿ ಜೈಸ್ವಾಲ್ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.ಇದಕ್ಕೂ ಮುನ್ನ ಈ ಮೂವರು ಸಂಪೂರ್ಣ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಬಾರ್ಬಡೋಸ್ನಿಂದ ಭಾರತ ತಂಡ ತವರಿಗೆ ಮರಳು ವಿಳಂಬವಾಗಿದ್ದರಿಂದ ಈ ಮೂವರ ಬದಲಿಗೆ ಮೊದಲೆರಡು ಪಂದ್ಯಗಳಿಗೆ ಹರ್ಷಿತ್ ರಾಣಾ, ಸಾಯಿ ಸುದರ್ಶನ್ ಹಾಗೂ ಜಿತೇಶ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.
ಭಾರತ ಮತ್ತು ಝಿಂಬಾಬ್ವೆ ಸರಣಿಯನ್ನು ಸೋನಿ ಸ್ಪೋರ್ಟ್ಸ್ ಚಾನೆಲ್ನಲ್ಲಿ ವೀಕ್ಷಿಸಬಹುದು. ಹಾಗೆಯೇ ಸೋನಿ ಲೈವ್ ಆ್ಯಪ್ನಲ್ಲೂ ಈ ಪಂದ್ಯದ ನೇರ ಪ್ರಸಾರ ಇರಲಿದೆ. ಈ ಪಂದ್ಯವು ಸಂಜೆ 4.30 ರಿಂದ ಶುರುವಾಗಲಿದೆ.
ಭಾರತ ಟಿ20 ತಂಡ: ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ , ಹರ್ಷಿತ್ ರಾಣಾ. (ಶಿವಂ ದುಬೆ, ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್- ಉಳಿದ ಮೂರು ಪಂದ್ಯಗಳಿಗೆ).
ಝಿಂಬಾಬ್ವೆ ತಂಡ: ಬ್ರಿಯಾನ್ ಬೆನೆಟ್, ತಡಿವಾನಾಶೆ ಮರುಮಣಿ, ಸಿಕಂದರ್ ರಾಝ (ನಾಯಕ), ಜೊನಾಥನ್ ಕ್ಯಾಂಪ್ಬೆಲ್, ಕ್ಲೈವ್ ಮದಂಡೆ (ವಿಕೆಟ್ ಕೀಪರ್), ಇನೋಸೆಂಟ್ ಕೈಯಾ, ವೆಸ್ಲಿ ಮಾಧೆವೆರೆ, ಲ್ಯೂಕ್ ಜೊಂಗ್ವೆ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸ್ಸಿಂಗ್ ಮುಝರ್ಬಾನಿ, ರಿಚರ್ಡ್ ನ್ಗರವ, ಬ್ರಾಂಡನ್ ಮಯ್ರಾಂಡೈ ಮಯ್ರಾಂಡೈ, ಬ್ರಾಂಡನ್ ಮಯ್ರಾಂಡೈಸ್ , ಫರಾಜ್ ಅಕ್ರಮ್, ಅಂತುಮ್ ನಖ್ವಿ.