ರಾಯ್ಪುರ: ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ ಫೈನಲ್ನಲ್ಲಿ ಎದುರಾದ ಸೋಲಿಗೆ ಭಾರತದ ಯುವ ಪಡೆ ಟಿ20 ಸರಣಿಯನ್ನು ಗೆದ್ದು ಕೊಳ್ಳುವ ಮೂಲಕ ಸೇಡು ತೀರಿಸಿ ಕೊಂಡಿದೆ.4ನೇ ಟಿ20 ಪಂದ್ಯದಲ್ಲಿ 20 ರನ್ಗಳ ಭರ್ಜರಿ ಗೆಲುವು ದಾಖಲಿಸಿದ ಭಾರತ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಸರಣಿಯಲ್ಲಿ 3-1 ಅಂತರದಲ್ಲಿ ಗೆದ್ದು ಬೀಗಿದೆ. ಮೊದಲು ಬ್ಯಾಟ್ ಮಾಡಿದ
ಭಾರತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ174 ರನ್ ಗಳಿಸಿತು.ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ154 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಆಸೀಸ್ ಪರ ಮ್ಯಾತ್ಯು ವೇಡ್ 36, ಟ್ರಾವಿಸ್ ಹೆಡ್ 31 ರನ್ ಗಳಿಸಿದರು. ಭಾರತದ ಪರ ಅಕ್ಷರ್ ಪಟೇಲ್ 3, ದೀಪಕ್ ಚಾಹರ್ 2 ವಿಕೆಟ್ ಪಡೆದರು. ಮೊದಲು ಬ್ಯಾಟ್ ಮಾಡಿದ ಭಾರತದ ಪರ 29 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 46 ರನ್ ಗಳಿಸಿದ ರಿಂಕು ಸಿಂಗ್ ಟಾಪ್ ಸ್ಕೋರರ್ ಆದರು. ಯಶಸ್ವಿ ಜೈಸ್ವಾಲ್ 28 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ನೆರವಿನಿಂದ 37 ರನ್, ಜಿತೇಶ್ ಶರ್ಮ 19 ಎಸೆತಗಳಲ್ಲಿ 3 ಸಿಕ್ಸರ್ ಒಂದು ಬೌಂಡರಿ ನೆರವಿನಿಂದ 35 ರನ್, ಋತುರಾಜ್ ಗಾಯಕ್ವಾಡ್ 28 ಎಸೆತಗಳಲ್ಲಿ 3 ಬೌಂಡರಿ 1 ಬೌಂಡರಿ ನೆರವಿನಿಂದ 32 ರನ್ ಬಾರಿಸಿದರು.