ನವೀ ಮುಂಬೈ:ಭಾರತ ತಂಡವು ಮಹಿಳೆಯರ ಏಕದಿನ ಕ್ರಿಕೆಟ್ ವಿಶ್ವಕಪ್ ಟ್ರೋಫಿ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಆ ಮೂಲಕ ಹರ್ಮನ್ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ
ಮಹಿಳಾ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಬರೆಯಿತು. ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ 2025ರ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡವು
ದಕ್ಷಿಣ ಆಫ್ರಿಕಾ ವಿರುದ್ಧ 52 ರನ್ಗಳ ಜಯದೊಂದಿಗೆ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿತು. ಮೊದಲ ಬಾರಿಗೆ ಭಾರತ ಮಹಿಳಾ ತಂಡ ಐಸಿಸಿ ವಿಶ್ವಕಪ್ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
ಮಳೆಯಿಂದಾಗಿ ಪಂದ್ಯ ಎರಡು ತಾಸುಗಳಷ್ಟು ವಿಳಂಬವಾಗಿ

ಆರಂಭವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಆಹ್ವಾನಿಸಲ್ಪಟ್ಟ ಭಾರತದ ಪರ ಶಫಾಲಿ ವರ್ಮಾ (87) ಹಾಗೂ ದೀಪ್ತಿ ಶರ್ಮಾ (58) ಉತ್ತಮ ಪ್ರದರ್ಶನ ತೋರಿದರು. ಭಾರತ ನಿಗದಿತ 50 ಓವರ್ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 298 ರನ್ ಗಳಿಸಿತು. ದಕ್ಷಿಣ ಆಫ್ರಿಕಾ 45 ಓವರ್ಗಳಲ್ಲಿ 246 ರನ್ಗೆ ಎಲ್ಲಾ ವಿಕೆಟ್ ಕಳೆದುಕೊಂಡು ಸೋಲುಂಡಿತು. ಭಾರತದ ಪರ ದೀಪ್ತಿ ಶರ್ಮ 5 ವಿಕೆಟ್ ಉರುಳಿಸಿ ಮಿಂಚಿದರು.















