ಹೊಸದಿಲ್ಲಿ:ಭಾರತದ ಆಪರೇಷನ್ ಸಿಂದೂರ್ಗೆ ಪ್ರತಿಯಾಗಿ ಪಾಕಿಸ್ತಾನವು ಭಾರತದ ಮೇಲೆ ಕ್ಷಿಪಣಿ ದಾಳಿ ನಡೆಸಲು ಪ್ರಯತ್ನ ಪಟ್ಟಿದ್ದು, ಇದನ್ನು ಭಾರತೀಯ ಸೇನೆ ವಿಫಲ ಮಾಡಿದೆ.ಈ ಬಗ್ಗೆ ಭಾರತೀಯ ಸೇನೆ ಮಾಹಿತಿ ನೀಡಿದ್ದು ಡ್ರೋನ್ ಮತ್ತು ಕ್ಷಿಪಣಿಗಳನ್ನು ಬಳಸಿ ದಾಳಿ ಮಾಡಲು ಪ್ರಯತ್ನಿಸಿದ್ದು, ಅದನ್ನು ಭಾರತ ವಿಫಲಗೊಳಿಸಿದೆ. ಪಾಕಿಸ್ತಾನ ಸೇನೆಯು ಭಾರತದ ಸೇನಾ ಶಿಬಿರಗಳ ಮೇಲೆ ಕ್ಷಿಪಣಿ ದಾಳಿ ನಡೆಸಲು ಪ್ರಯತ್ನಿಸಿತ್ತು ಜೊತೆಗೆ
ಶ್ರೀನಗರ, ಪಠಾಣ್ಕೋಟ್, ಅಮೃತಸರ, ಲೂಧಿಯಾನ ಹಾಗೂ ಚಂಡೀಗಢ ಮೇಲೆಯೂ ಪಾಕಿಸ್ತಾನ ಸೇನೆ ದಾಳಿ ನಡೆಸಿತ್ತು.ಇದನ್ನು ವಿಫಲಗೊಳಿಸಿ,ಇದಕ್ಕೆ ತಕ್ಕ ಉತ್ತರ ನೀಡಿದ ಭಾರತದ ವಾಯುಸೇನೆ, ಲಾಹೋರ್ನ ವಾಯು ನೆಲೆಯಲ್ಲಿದ್ದ ರಾಡಾರ್ ವ್ಯವಸ್ಥೆಯನ್ನು ನಾಶಪಡಿಸಿದೆ. ಮಿಲಿಟರಿ ನೆಲೆಗಳ ಮೇಲೆ ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಬಳಸಿ ದಾಳಿ ಮಾಡಲು ಪ್ರಯತ್ನಿಸಿತು. ಇವುಗಳನ್ನು ಇಂಟಿಗ್ರೇಟೆಡ್ ಕೌಂಟರ್ ಯುಎಎಸ್ ಗ್ರಿಡ್ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳಿಂದ ನಿಷ್ಕ್ರೀಯಗೊಳಿಸಲಾಯಿತು. ಈ ದಾಳಿಯ ಅವಶೇಷಗಳನ್ನು ಹಲವಾರು ಸ್ಥಳಗಳಿಂದ ವಶಪಡಿಸಿಕೊಳ್ಳಲಾಗುತ್ತಿದೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ.
ಅಲ್ಲದೆ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ರಕ್ಷಣಾ ರಾಡಾರ್ಗಳು ಮತ್ತು ವ್ಯವಸ್ಥೆಗಳನ್ನು ಗುರಿಯಾಗಿಸಿ ಪ್ರತಿ ದಾಳಿ ನಡೆಸಿ ಲಾಹೋರ್ನಲ್ಲಿರುವ ವಾಯು ರಕ್ಷಣಾ ವ್ಯವಸ್ಥೆಯನ್ನು ಧ್ವಂಸ ಮಾಡಲಾಗಿದೆ. ಭಾರತದ ವಾಯವ್ಯ ಭಾಗದಲ್ಲಿರುವ ಸೇನಾ ಶಿಬಿರಗಳನ್ನು ಗುರಿಯಾಗಿಸಿ ಪಾಕಿಸ್ತಾನ ನಡೆಸಿದ ದಾಳಿಗೆ ಪ್ರತ್ಯುತ್ತರವಾಗಿ, ಲಾಹೋರ್ನಲ್ಲಿರುವ ವಾಯುನೆಲೆಯ ಸಂಪರ್ಕ ವ್ಯವಸ್ಥೆಯನ್ನು ಭಾರತೀಯ ಸೇನೆ ಗುರುವಾರ ನಾಶಪಡಿಸಿದೆ. ಪಾಕಿಸ್ತಾನ ಸೇನೆಯು ಡ್ರೋನ್ ಬಳಸಿ ಕ್ಷಿಪಣಿ ದಾಳಿ ನಡೆಸಿತ್ತು. ಇದೇ ಮಾದರಿಯಲ್ಲೇ ಭಾರತದ ವಾಯುಸೇನೆಯು ಪಾಕ್ಗೆ ಉತ್ತರ ನೀಡಿದೆ.
ಕಾಶ್ಮೀರದ ಪಹಲ್ಗಾಮ್ನಲ್ಲಿ 26 ಪ್ರವಾಸಿಗರನ್ನು ಗುರಿಯಾಗಿಸಿ ಭಯೋತ್ಪಾದಕ ದಾಳಿ ನಡಸಿದ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿ ಭಾರತ ಸೇನೆಯು ‘ಆಪರೇಷನ್ ಸಿಂಧೂರ’ವನ್ನು ಬುಧವಾರ ನಸುಕಿನ 1.05ಕ್ಕೆ ಆರಂಭಿಸಿತ್ತು. 25 ನಿಮಿಷಗಳಲ್ಲಿ 9 ನೆಲೆಗಳ ಮೇಲೆ ನಿರ್ದಿಷ್ಟ ದಾಳಿ ನಡೆಸಿತ್ತು. ಭಾರತದ ದಾಳಿಗೆ ಪ್ರತಿಯಾಗಿ ದಾಳಿ ನಡೆಸುವ ಬೆದರಿಕೆಯೊಡ್ಡಿದ್ದ ಪಾಕಿಸ್ತಾನ, ಉತ್ತರ ಹಾಗೂ ವಾಯವ್ಯ ಭಾಗದ ಮೇಲೆ ದಾಳಿ ನಡೆಸಿದೆ. ಇದಕ್ಕೆ ಭಾರತದ ವಾಯು ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.