ಮುಂಬೈ:ಟಿ20 ವಿಶ್ವಕಪ್ಗೆ 15 ಸದಸ್ಯರ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದೆ. ಈ 15 ಸದಸ್ಯರ ಹೊರತಾಗಿ ನಾಲ್ವರು ಆಟಗಾರನನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ. ಅದಾಗ್ಯೂ ಕೆಲವು ಪ್ರಮುಖ ಆಟಗಾರನನ್ನು ತಂಡದಿಂದ ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.ಅದರಲ್ಲಿ ಕೇಳಿಬರುತ್ತಿರುವ ಪ್ರಮುಖ ಹೆಸರೆಂದರೆ ಕನ್ನಡಿಗ
ಕೆ.ಎಲ್ ರಾಹುಲ್. ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ಮಿಂಚಿರುವ ರಾಹುಲ್ಗೆ ಈ ಬಾರಿಯ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ನೀಡಲಾಗಿಲ್ಲ. ಟಿ20 ವಿಶ್ವಕಪ್ಗೆ ಟೀಂ ಇಂಡಿಯಾವನ್ನು ಪ್ರಕಟಿಸಿದ ಬಳಿಕ ಕೆಎಲ್ ರಾಹುಲ್ರನ್ನು ಆಯ್ಕೆ ಮಾಡದಿರುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಪ್ರಶ್ನೆಗಳಿಗೆ ನಾಯಕ ರೋಹಿತ್ ಶರ್ಮ ಹಾಗೂ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಟಿ20 ವಿಶ್ವಕಪ್ಗೆ ಆಯ್ಕೆಯಾದ ತಂಡದ ಕುರಿತು ಪತ್ರಿಕಾಗೋಷ್ಠಿ ನಡೆಸಿದರು. ಇದರಲ್ಲಿ ಪತ್ರಕರ್ತರು ಕೇಳಿದ ಪ್ರಮುಖ ಪ್ರಶ್ನೆಯೆಂದರೆ ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ ಏಕೆ ಸ್ಥಾನ ಪಡೆದಿಲ್ಲ? ಎಂಬುದು.ಈ ಬಗ್ಗೆ ಮಾತನಾಡಿದ ಅಜಿತ್ ಅಗರ್ಕರ್, ನಮಗೆ ಮಧ್ಯಮ ಕ್ರಮಾಂಕದಲ್ಲಿ ಆಟಗಾರನ ಅಗತ್ಯವಿತ್ತು. ಆದರೆ ಕೆಎಲ್ ರಾಹುಲ್ ಅಗ್ರಸ್ಥಾನದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. ಹೀಗಾಗಿ ನಾವು ಅವರನ್ನು ಆಯ್ಕೆಗೆ ಪರಿಗಣಿಸಲು ಸಾಧ್ಯವಾಗಲಿಲ್ಲ. ಇದರ ಜೊತೆಗೆ ಮಧ್ಯಮ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಉತ್ತಮ ಪ್ರದರ್ಶನ ನೀಡಿದ್ದರು. ರಿಷಬ್ ಪಂತ್ ಕೂಡ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. ಪಂತ್ ಮತ್ತು ಸಂಜು ಮಧ್ಯಮ ಕ್ರಮಾಂಕದಲ್ಲಿ ಹೆಚ್ಚು ಸಮಯ ಬ್ಯಾಟಿಂಗ್ ಮಾಡಿದ್ದಾರೆ. ಹೀಗಾಗಿ ಇವರನ್ನು ಆಯ್ಕೆಗೆ ಪರಿಗಣಿಸಬೇಕಾಯಿತು ಎಂದರು.
ಟಿ20 ವಿಶ್ವಕಪ್ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.