ಸುಳ್ಯ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸ್ವಾವಲಂಬಿ ಬದುಕು ಸಾಧ್ಯವಾದರೆ, ದೇಶದ ಬೆನ್ನೆಲುಬುದಾದ ಕೃಷಿಕರಿಗೆ ಇನ್ನಷ್ಟು ಗೌರವ ದೊರೆಯುವಂತಾದರೆ ಸ್ವಾತಂತ್ರ್ಯ ಇನ್ನಷ್ಟು ಅರ್ಥಪೂರ್ಣ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ
ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿರಿಯರ ತ್ಯಾಗ ಹೋರಾಟದಿಂದ ಪಡೆದ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸುವುದರ ಮೂಲಕ ಶಿಕ್ಷಣ ಆರೋಗ್ಯ ಕ್ಷೇತ್ರದ ಬೆಳವಣಿಗೆಗೆ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು. ಸಮರ್ಥ ನಾಯಕತ್ವದಿಂದ ದೇಶಕ್ಕೆ ಗೌರವ ಬಂದಿದೆ ಎಂದ ಅವರು ದೇಶದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಮಕ್ಕಳಿಗೆ ವಿದ್ಯೆ, ಸಂಸ್ಕಾರ, ಸಂಸ್ಕೃತಿ ತುಂಬಬೇಕು ಎಂದರು.
ಸುಳ್ಯ ತಹಶೀಲ್ದಾರ್ ಎಂ.ಮಂಜುನಾಥ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯ ದಿನದ ಸಂದೇಶ ನೀಡಿದರು.
ಬಳಿಕ ಆಕರ್ಷಕ ಪಥ ಸಂಚಲನ ನಡೆಯಿತು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಎಂ.ವೆಂಕಪ್ಪ ಗೌಡ, ಬುಸ್ಧ ನಾಯ್ಕ್, ಸುಧಾಕರ ಕುರುಂಜಿಭಾಗ್, ಸರೋಜಿನಿ ಪೆಲ್ತಡ್ಕ, ಶೀಲಾ ಅರುಣ ಕುರುಂಜಿ, ಕಿಶೋರಿ ಶೇಠ್, ಪೂಜಿತಾ ಕೆ.ಯು, ಶಿಲ್ಪಾ ಸುದೇವ್, ಶಶಿಕಲಾ ನೀರಬಿದಿರೆ, ಪ್ರವಿತಾ ಪ್ರಶಾಂತ್, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಹೆಚ್.ಎಂ., ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಆರಕ್ಷಕ ಉಪನಿರೀಕ್ಷಕ ಈರಯ್ಯ ದೂಂತೂರು, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ, ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿವೃತ್ತ ಸೈನಿಕರಾದ ವೀರಪ್ಪ ಗೌಡ ಕೆ ಅವರನ್ನು ಸನ್ಮಾನಿಸಲಾಯಿತು.