ನವದೆಹಲಿ: 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣಕ್ಕೂ ಮೊದಲು ರಾಜ್ಘಾಟ್ನಲ್ಲಿರುವ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಅವರು ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ, ಭಾರತೀಯ ವಾಯುಪಡೆಯ
ಎರಡು Mi-17 ಹೆಲಿಕಾಪ್ಟರ್ಗಳು ಕೆಂಪು ಕೋಟೆಯ ಮೇಲೆ ಪುಷ್ಪಮಳೆ ಸುರಿಸಿದವು. ಒಂದು ಹೆಲಿಕಾಪ್ಟರ್ ಧ್ವಜದೊಂದಿಗೆ ಹಾರಿದರೆ, ಇನ್ನೊಂದು ಹೆಲಿಕಾಪ್ಟರ್ನಲ್ಲಿ ಆಪರೇಷನ್ ಸಿಂಧೂರ ಬ್ಯಾನರ್ ಅನ್ನು ಪ್ರದರ್ಶಿಸಲಾಗಿದೆ.ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸತತ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಯಾವುದೇ

ಪರಮಾಣು ಬೆದರಿಕೆಯನ್ನು ಇನ್ನು ಮುಂದೆ ಸಹಿಸಲಾಗುವುದಿಲ್ಲ ಎಂದು ಅವರು ಹೇಳಿದರು. ನಾವು ಈಗ ಭಯೋತ್ಪಾದಕರು ಮತ್ತು ಭಯೋತ್ಪಾದನಾ ಬೆಂಬಲಿಗರಿಗೆ ಕಡಿವಾಣ ಹಾಕಿದ್ದೇವೆ ಎಂದು ಹೇಳಿದರು.
ಹಿಮಾಚಲ ಪ್ರದೇಶ, ಕಾಶ್ಮೀರದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪಗಳಲ್ಲಿ ಪ್ರಾಣ ಕಳೆದುಕೊಂಡವರನ್ನು ಸ್ಮರಿಸುತ್ತೇನೆ ಎಂದ ಅವರು
ಆಪರೇಷನ್ ಸಿಂಧೂರದ ವೀರ ಯೋಧರಿಗೆ ನಮನ ಸಲ್ಲಿಸುವ ದಿನವಿದು.ಆಪರೇಷನ್ ಸಿಂಧೂರ ದೇಶ ಹಿಂದೆಂದೂ ನೋಡದ ಒಂದು ಕಾರ್ಯಾಚರಣೆಯಾಗಿದೆ ಎಂದು ಬಣ್ಣಿಸಿದರು.





