ಸುಳ್ಯ: ಸುಳ್ಯದ ಇಂದಿರಾ ಕ್ಯಾಂಟೀನ್ಗೆ ಸುಳ್ಯ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಅಭಿಷೇಕ್ ವಿ. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂದಿರಾ ಕ್ಯಾಂಟೀನ್ನ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು ಇಂದಿರಾ ಕ್ಯಾಂಟೀನ್ನಲ್ಲಿ ಊಟ ಮಾಡುತ್ತಿದ್ದ ವಿದ್ಯಾರ್ಥಿಗಳು ಹಾಗೂ
ಸಾರ್ವಜನಿಕರಲ್ಲಿ ಮಾತನಾಡಿ ಕ್ಯಾಂಟೀನ್ನಲ್ಲಿ ವಿರತಣೆಯಾಗುವ ಆಹಾರದ ಗುಣಮಟ್ಟದ ಬಗ್ಗೆ ಕೇಳಿ ತಿಳಿದುಕೊಂಡರು. ಕ್ಯಾಂಟೀನ್ನ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಇಂದಿರಾ ಕ್ಯಾಂಟೀನ್ನ ಆಹಾರದ ಮೆನುವಿನಲ್ಲಿ ಕೆಲವು ಬದಲಾವಣೆ ಮಾಡಲು ಸರಕಾರ ಸೂಚಿಸಿದೆ ಎಂದು ಅವರು ಹೇಳಿದರು.
ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಹೆಚ್.ಎಂ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ ದಿನೇಶ್ ಕುಕ್ಕುಜಡ್ಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಗೀತಾ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕಿ ನಳಿನಿ, ಅಧೀಕ್ಷಕ ಶಿವಪ್ರಸಾದ್ ಇದ್ದರು.