ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಅಂಗವಾಗಿ ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹೊಸದಾಗಿ ಆರಂಭಿಸಲಾದ 16 ಇಂದಿರಾ ಕ್ಯಾಂಟೀನ್ಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು.ರಾಜ್ಯದ ಎಲ್ಲಾ
ಶಾಸಕರು ತಿಂಗಳಿಗೊಮ್ಮೆ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ ಅಲ್ಲಿ ನೀಡಲಾಗುವ ಆಹಾರದ ಗುಣಮಟ್ಟವನ್ನು ಪರಿಶೀಲಿಸುವಂತೆ ಸೂಚಿಸಿರುವುದಾಗಿ ತಿಳಿಸಿದರು. ಇಂದಿರಾ ಕ್ಯಾಂಟೀನ್ಗಳಲ್ಲಿ 5 ರೂಪಾಯಿಗೆ ಉಪಾಹಾರ ಹಾಗೂ 10 ರೂಪಾಯಿಗೆ ಊಟ ನೀಡಲಾಗುತ್ತಿದೆ. ಕ್ಯಾಂಟೀನ್ಗಳ ಸಂಖ್ಯೆಯನ್ನು 380ಕ್ಕೂ ಹೆಚ್ಚು ಹೆಚ್ಚಿಸಲು ಸರ್ಕಾರ ಯೋಜಿಸಿದೆಎಂದು ತಿಳಿಸಿದರು. ಉತ್ತಮ ಸ್ವಚ್ಛತೆ ಮತ್ತು ನಿರ್ವಹಣೆ ಮಾಡಿದ ಕ್ಯಾಂಟೀನ್ಗಳಿಗೆ ಪ್ರಶಸ್ತಿಯನ್ನು ಅವರು ಪ್ರದಾನ ಮಾಡಿದರು.ಇಂದಿರಾ ಕ್ಯಾಂಟೀನ್ಗಳಲ್ಲಿ ಆಹಾರದ ಗುಣಮಟ್ಟ ಕಾಪಾಡುವುದು ಅತ್ಯಂತ ಮುಖ್ಯ. ಪೌರಾಡಳಿತ ಮತ್ತು ನಗರಾಭಿವೃದ್ಧಿ ಅಧಿಕಾರಿಗಳು ಕ್ಯಾಂಟೀನ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತಿತರರು ಉಪಸ್ಥಿತದ್ದರು.














