ಸುಳ್ಯ:ಸುಳ್ಯದ ಇಂದಿರಾ ಕ್ಯಾಂಟೀನ್ನಲ್ಲಿ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧೀಯವರ 107ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ, ಸಹಕಾರಿ ಧುರೀಣ ಪಿ ಸಿ ಜಯರಾಮ ನಗರ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಎಂ.ವೆಂಕಪ್ಪ ಗೌಡ, ಚೊಕ್ಕಾಡಿ ವಿದ್ಯಾಸಂಸ್ಥೆಗಳ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ಟ್ರಸ್ಟ್ ಕಾರ್ಯಧ್ಯಕ್ಷ ಗೋಕುಲ್ದಾಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.. ಕಾರ್ಯಕ್ರಮದಲ್ಲಿ
ಪ್ರಮುಖರಾದ ಗೀತಾ ಕೋಲ್ಚಾರ್, ಸತ್ಯಕುಮಾರ್ ಆಡಿಂಜಾ, ಡೇವಿಡ್ ಧೀರಾ ಕ್ರಾಸ್ತ, ರಾಜು ಪಂಡಿತ್, ನಂದರಾಜ್ ಸಂಕೇಶ್, ಭವಾನಿ ಶಂಕರ ಕಲ್ಮಡ್ಕ, ಧನುಷ್ ಕುಕ್ಕೇಟಿ, ಶಹೀದ್ ಪಾರೆ, ಮಹೇಶ್ ಬೆಳ್ಳಾರ್ಕರ್, ಕೇಶವ ಮೊರಂಗಲ್ಲು, ಮಧುಸೂಧನ ಬೂಡು, ಮಂಜುನಾಥ್ ಮಡ್ತಿಲ, ಜುಬೆರ್ ಅರಂತೋಡು, ಚಂದ್ರಶೇಖರ ಕೋಲ್ಚಾರ್, ವಿದ್ಯಾರ್ಥಿಗಳು ಮತ್ತು ಗ್ರಾಹಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದಿರಾ ಕ್ಯಾಂಟೀನ್ ನ ಗ್ರಾಹಕರಿಗೆ ಎಲ್ಲರಿಗೂ ಉಚಿತವಾಗಿ ಮಧ್ಯಾಹ್ನದ ಭೋಜನ ನೀಡಲಾಯಿತು.