ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಕಾರ್ಯಕ್ರಮ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.ಜಿಲ್ಲಾ ಕಾಂಗ್ರೆಸ್ ಸದಸ್ಯ ನಂದರಾಜ್ ಸಂಕೇಶ್ ಸಂಸ್ಮರಣಾ ಭಾಷಣ ಮಾಡಿದರು.ಬ್ಲಾಕ್ ಕಾಂಗ್ರೆಸ್
ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ ಸ್ವಾಗತಿಸಿ,ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ವಂದಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಅಂಬೆಕಲ್ಲು, ಜಯಪ್ರಕಾಶ್ ನೆಕ್ರಪ್ಪಾಡಿ, ಆನಂದ ಬೆಳ್ಳಾರೆ, ಶಹೀದ್ ಪಾರೆ, ಜಮಾಲ್ ಪಂಜ, ಮಂಜುನಾಥ್ ಮಡ್ತಿಲ ಉಪಸ್ಥಿತರಿದ್ದರು.














