ಸುಳ್ಯ:ಸುಳ್ಯದಲ್ಲಿ ಕೃಷಿ ಆಧಾರಿತ ಕೈಗಾರಿಕಾ ವಲಯ ಸ್ಥಾಪನೆ ಮಾಡಿ ಯುವಕರಿಗೆ ಉದ್ಯೋಗಾವಕಾಶ ಸೃಷ್ಠಿಸಬೇಕು, ಸುಳ್ಯ ತಾಲೂಕಿನಲ್ಲಿ ಅಡಿಕೆಗೆ ಬಾಧಿಸಿರುವ ಹಳದಿ ರೋಗಕ್ಕೆ ಶಾಶ್ವತ ಪರಿಹಾರ ಹುಡುಕಬೇಕು ಎಂದು ಆಗ್ರಹಿಸಿ ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೂಲಕ
ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಸುಳ್ಯದಲ್ಲಿ ವಾಣೀಜ್ಯ ಬೆಳೆಗಳಾದ ಅಡಿಕೆ, ರಬ್ಬರ್, ತೆಂಗು, ಕಾಳುಮೆಣಸು ಬೆಳೆಯಲಾಗುತ್ತದೆ. ಆದರೆ ಈ ಕೃಷಿ ಉತ್ಪನ್ನಗಳ ಯಾವುದೇ ಕೈಗಾರಿಕೆಗಳು ಇಲ್ಲದ ಕಾರಣ ಕೃಷಿ ಉತ್ಪನ್ನಗಳಿಗೆ ಸರಿಯಾದ ದರ ಸಿಗುತ್ತಿಲ್ಲ. ಯುವಕರಿಗೆ ಉದ್ಯೋಗಾವಕಾಶವೂ ಇಲ್ಲ. ಆದುದರಿಂದ ಸುಳ್ಯದಲ್ಲಿ ಕೈಗಾರಿಕಾ ವಲಯ ಸ್ಥಾಪನೆ ಮಾಡಬೇಕು ಎಂದು ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಯಡಿಯೂರಪ್ಪ ಅವರ ಮೂಲಕ ಮನವಿ ಸಲ್ಲಿಸಲಾಯಿತು.
ಸುಳ್ಯ ತಾಲೂಕಿನಲ್ಲಿ ಹಳದಿ ರೋಗ ಬಾಧೆಯಿಂದ ವ್ಯಾಪಕವಾಗಿ ಅಡಿಕೆ ಕೃಷಿ ನಾಶವಾಗಿದೆ. ಇದಕ್ಕೆ ಶಾಶ್ವತ ಪರಿಹಾರ ನೀಡಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಕೃಷಿ ಆಧಾರಿತ ಕೈಗಾರಿಕಾ ವಲಯ ಸ್ಥಾಪನೆಗೆ ಪ್ರಯತ್ನ ನಡೆಸಲಾಗುವುದು ಎಂದು ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.ಬಿಜೆಪಿ ಮಂಡಲ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಗಿದೆ.