ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಇಲ್ಲಿನ ಸ್ವರಾಜ್ ಮೈದಾನದಲ್ಲಿ ಹಮ್ಮಿಕೊಂಡ ಐದು ದಿನಗಳ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2025-26’ ಆರಂಭಗೊಂಡಿತು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆತಿಥ್ಯದಲ್ಲಿ ನಡೆಯುತ್ತಿರುವ
85ನೇ ಕ್ರೀಡಾಕೂಟವನ್ನು ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಫರೀದ್ ಉದ್ಘಾಟಿಸಿದರು.ಉದ್ಘಾಟನಾ ಸಂಕೇತವಾಗಿ ತ್ರಿವರ್ಣ ಬೆಲೂನು ಗಾಳಿಗೆ ಹಾರಿ ಬಿಡಲಾಯಿತು. ಕ್ರೀಡಾಜ್ಯೋತಿ ಬೆಳಗಿದ ಬಳಿಕ, ಕ್ರೀಡಾಪಟು ದೀಕ್ಷಿತಾ ರಾಮಕೃಷ್ಣ ಪ್ರತಿಜ್ಞಾ ವಿಧಿ ಬೋಧಿಸಿದರು.ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಕ್ರೀಡಾ ಒಕ್ಕೂಟದ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಭಗವಾನ್ ಬಿ.ಸಿ. ವಿಶ್ವವಿದ್ಯಾಲಯದ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ.ಮೋಹನ ಆಳ್ವ,
ಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸೀನ್,ಕೂಟದ ವೀಕ್ಷಕರಾದ ವಿ.ಶಂಕರ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ ಅರ್ಜುನ್, ಮಾಜಿ ಸಚಿವ ಅಭಯಚಂದ್ರ ಜೈನ್ , ಇಫ್ತಿಕರ್ ಅಲಿ,ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ.ವಿನಯ್ ಆಳ್ವ ಮತ್ತಿತರರು ಇದ್ದರು.

ಕ್ರೀಡಾಕೂಟದಲ್ಲಿ ದೇಶದ 304ಕ್ಕೂ ಅಧಿಕ ವಿಶ್ವವಿದ್ಯಾಲಯಗಳ ನಾಲ್ಕು ಸಾವಿರಕ್ಕೂ ಅಧಿಕ ಅಥ್ಲೀಟ್ಗಳು ಹಾಗೂ ಸುಮಾರು 1000 ಕ್ರೀಡಾಧಿಕಾರಿಗಳು ಪಾಲ್ಗೊಂಡಿದ್ದಾರೆ.ಭಾರತೀಯ ಕಲಾ ಸಂಸ್ಕೃತಿಯನ್ನು ಪ್ರತಿಬಿಂಬಿಸಿದ ಮೆರವಣಿಗೆಯು, ಕ್ರೀಡಾಕೂಟದ ಉದ್ಘಾಟನೆಯಲ್ಲಿ ಗಮನ ಸಳೆಯಿತು.ಇದಕ್ಕೂ ಮೊದಲು ಕ್ರೀಡಾಕೂಟದಲ್ಲಿ ಪಾಲ್ಗೊಂಡ ಎಲ್ಲ ವಿಶ್ವವಿದ್ಯಾಲಯಗಳ ಕ್ರೀಡಾಪಟುಗಳ ಪಥಸಂಚಲನ ನಡೆಯಿತು. ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಗೌರವ ರಕ್ಷೆ ಸ್ವೀಕರಿಸಿದರು.
ಮಹಿಳಾ ಕಬಡ್ಡಿ ವಿಶ್ವಕಪ್ ವಿಜೇತ ಭಾರತೀಯ ತಂಡ ಪ್ರತಿನಿಧಿಸಿದ ಧನಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು.
‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2025-26’ ಕ್ರೀಡಾಕೂಟದ ಮೊದಲ ದಿನವಾದ ಸೋಮವಾರ ನಡೆದ ಪುರುಷರ ಮತ್ತು ಮಹಿಳೆಯರ 10 ಸಾವಿರ ಮೀಟರ್ಸ್ ಓಟದ ಸ್ಪರ್ಧೆ ನಡೆಯಿತು.
ಉಳಿದಂತೆ ಮಹಿಳಾ ಮತ್ತು ಪುರುಷರ ವಿಭಾಗದ 800 ಮೀ. ಓಟ, ತ್ರಿವಿಧ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಡಿಸ್ಕಸ್ ಥ್ರೋ, 400 ಮೀ. ಹರ್ಡಲ್ಸ್, 100 ಮೀ. ಓಟ, 4*400 ಮೀ. ರಿಲೇ ಸ್ಪರ್ಧೆಗಳ ಅರ್ಹತಾ ಸುತ್ತು ಹಾಗೂ ಸೆಮಿಫೈನಲ್ ನಡೆದವು.












