ಸುಳ್ಯ: ಸುಳ್ಯದ ಪತ್ರಕರ್ತರು ರಾಜ್ಯಕ್ಕೆ ಮಾದರಿ. ಸಮಾಜದ ಜೊತೆಯಲ್ಲಿ ಬೆರೆತು ಸಮಸ್ಯೆಗಳನ್ನು ಬಿಂಬಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು. ಅವರು ಶನಿವಾರ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ಪತ್ರಿಕಾ ದಿನಾಚರಣೆಯ ಆಮಂತ್ರಣ ಪತ್ರಿಕೆಯನ್ನು
ಬಿಡುಗಡೆ ಮಾಡಿ ಅವರು ಮಾತನಾಡಿದರು.
ಪತ್ರಿಕೆಗಳು ಸಮಾಜಕ್ಕೆ ನೀಡಿದ ಕೊಡುಗೆ ಅನನ್ಯ. ಅದರಲ್ಲಿ ದುಡಿಯುವ ಪತ್ರಕರ್ತರು ಒಂದು ದಿನ ಒಟ್ಟಾಗಿ ಸೇರಿ ಆಚರಿಸುವ ದಿನಾಚರಣೆ ಕೂಡ ಅರ್ಥಪೂರ್ಣವಾಗಿ ನಡೆಯಲಿ ಎಂದು ಭರತ್ ಮುಂಡೋಡಿ ಆಶಿಸಿದರು.
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸದಸ್ಯರ ನೂತನ ಕಾರ್ಡ್ಗಳನ್ನು ವಿತರಿಸಿ ಪತ್ರಕರ್ತರು ಸಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಸುಳ್ಯ ತಾಲೂ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ನಿರ್ದೇಶಕ ಗಿರೀಶ್ ಅಡ್ಪಂಗಾಯ ಉಪಸ್ಥಿತರಿದ್ದರು. ಕಾರ್ಯದರ್ಶಿ ದಯಾನಂದ ಕೊರತ್ತೋಡಿ ವಂದಿಸಿದರು.






