ಚೆನ್ನೈ: ಐಪಿಎಲ್ 17ನೇ ಆವೃತ್ತಿಗೆ ಮಾ.22ರಿಂದ ಆರಂಭವಾಗಲಿದೆ.ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯಲ್ಲಿದೆ. ಈ ಪಂದ್ಯಕ್ಕೂ ಮುನ್ನ ಅದ್ಧೂರಿಯಾಗಿ ಉದ್ಘಾಟನಾ ಸಮಾರಂಭವೂ ನಡೆಯಲ್ಲಿದೆ.ಪ್ರತಿ ಬಾರಿಯಂತೆ ಈ ಬಾರಿಯೂ
ಉದ್ಘಾಟನಾ ಸಮಾರಂಭ ನಡೆಸಲು ಬಿಸಿಸಿಐ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಉದ್ಘಾಟನಾ ಪಂದ್ಯ ನಡೆಯಲಿರುವ ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಈ ಸಂಭ್ರಮಾಚರಣೆ ನಡೆಯಲಿದೆ. ಶುಕ್ರವಾರ ಸಂಜೆ 6.30ಕ್ಕೆ ಉದ್ಘಾಟನಾ ಸಮಾರಂಭ ಆರಂಭವಾಗಲಿದೆ. ಒಂದು ಗಂಟೆ ಕಾಲ ಸಮಾರಂಭ ನಡೆಯಲಿದೆ.ಈ ಬಾರಿಯ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ನ ಸಿನಿಮಾ ತಾರೆಯರು, ಹಿನ್ನಲೆ ಗಾಯಕರುಗಳು ಭಾಗವಹಿಸಿಲಿದ್ದಾರೆ.ಚೆನ್ನೈ ಮತ್ತು ಬೆಂಗಳೂರು ನಡುವಿನ ಮೊದಲ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.
ಆರಂಭಿಕ ಪಂದ್ಯ ಹೊರತುಪಡಿಸಿ ಉಳಿದೆಲ್ಲಾ ರಾತ್ರಿ ಪಂದ್ಯಗಳು ರಾತ್ರಿ 7.30ಕ್ಕೆ ಆರಂಭವಾಗಲಿವೆ. ಐಪಿಎಲ್ ಇತಿಹಾಸದಲ್ಲಿ ಇದು ಒಂಬತ್ತನೇ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯವನ್ನು ಆಡಲಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ, ಸಿಎಸ್ಕೆ ಈ ಹಿಂದೆ 2009, 2011, 2012, 2018, 2019, 2022 ಮತ್ತು 2023 ರಲ್ಲಿ ಸೀಸನ್ ಓಪನರ್ ಆಡಿದೆ. ಸಾರ್ವತ್ರಿಕ ಚುನಾವಣೆ ಕಾರಣ, ಬಿಸಿಸಿಐ ಈ ವರ್ಷದ ಐಪಿಎಲ್ನ ಮೊದಲ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಮೊದಲ ಹಂತದಲ್ಲಿ 17 ದಿನಗಳಲ್ಲಿ 2 ಡಬಲ್ ಹೆಡರ್ ಸೇರಿದಂತೆ ಒಟ್ಟು 21 ಪಂದ್ಯಗಳು ನಡೆಯಲಿವೆ. ಇನ್ನುಳಿದ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.







