ಚೆನ್ನೈ:ಏಪ್ರಿಲ್ 08ರಂದು ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಕಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಚೆನ್ನೈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ರವೀಂದ್ರ ಜಡೇಜಾ ವಿಶೇಷ ದಾಖಲೆ ಒಂದನ್ನು ಬರೆದಿದ್ದಾರೆ.ಐಪಿಎಲ್ನಲ್ಲಿ 1000+ ರನ್, 100 ಕ್ಯಾಚ್ ಹಾಗೂ 100+ ವಿಕೆಟ್ ಪಡೆದ ಮೊದಲ ಆಟಗಾರ ಎಂಬ ದಾಖಲೆಯನ್ನು
ರವೀಂದ್ರ ಜಡೇಜಾ ತಮ್ಮದಾಗಿಸಿಕೊಂಡಿದ್ದಾರೆ. ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್, ಕೊಚ್ಚಿ ಟಸ್ಕರ್ ಕೇರಳ, ಗುಜರಾತ್ ಲಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿರುವ ಜಡೇಜಾ 156 ವಿಕೆಟ್, 2776 ರನ್ ಹಾಗೂ 100 ಕ್ಯಾಚ್ಗಳನ್ನು ಹಿಡಿದಿದ್ದಾರೆ. ಈ ಮೂಲಕ ಐಪಿಎಲ್ನ ಅತ್ಯಂತ ಉತ್ತಮ ಆಲ್ರೌಂಡರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ವಿಶೇಷ ಸಾಧನೆಯನ್ನು ಮಾಡಿದ್ದಾರೆ.
ಕಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಪರ ಸ್ಪಿನ್ ದಾಳಿ ಸಂಘಟಿಸಿದ ರವೀಂದ್ರ ಜಡೇಜಾ 4 ಓವರ್ಗಳಲ್ಲಿ 18 ರನ್ ನೀಡಿ 3 ವಿಕೆಟ್ ಕಬಳಿಸಿದರು. ಹಾಗೆಯೇ ಈ ಪಂದ್ಯದಲ್ಲಿ ಜಡೇಜಾ 2 ಅತ್ಯುತ್ತಮ ಕ್ಯಾಚ್ಗಳನ್ನು ಸಹ ಹಿಡಿದಿದ್ದರು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಒಂದನ್ನು ಬರೆದಿದ್ದಾರೆ.