ಧರ್ಮಶಾಲಾ: ಧರ್ಮಶಾಲಾದಲ್ಲಿ ಇಂದು ನಡೆದ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಐಪಿಎಲ್ ಪಂದ್ಯವನ್ನು ಅರ್ಧದಲ್ಲೇ ರದ್ದುಗೊಳಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ಪಂದ್ಯ ಅರ್ಧಕ್ಕೆ ನಿಲ್ಲಿಸಲಾಗಿದೆ ಎಂದು ವರದಿಯಾಗಿದೆ.ಗಡಿಯಲ್ಲಿ ಪಾಕಿಸ್ತಾನ ಹಾಗೂ ಭಾರತ ನಡುವೆ ಗಡಿಯಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾದ
ಹಿನ್ನಲೆಯಲ್ಲಿ ಧರ್ಮಶಾಲಾದ ಪಂದ್ಯವನ್ನು ಅರ್ಧದಲ್ಲೇ ರದ್ದುಗೊಳಿಸಿದೆ ಎಂದು ಹೇಳಲಾಗಿದೆ.
ಈ ಮೊದಲು ಮಳೆಯಿಂದಾಗಿ ಪಂದ್ಯ ಒಂದು ತಾಸು ವಿಳಂಬವಾಗಿ ಆರಂಭವಾಗಿತ್ತು. ಬಳಿಕ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್ 10.1 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿತ್ತು.ಪ್ರಿಯಾಂಶ್ ಆರ್ಯ 70 ಹಾಗೂ ಪ್ರಭಸಿಮ್ರನ್ ಸಿಂಗ್ ಅಜೇಯ 50 ರನ್ ಗಳಿಸಿದ್ದರು.ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಇಂದು ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದರು.





