ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಮಧ್ಯೆಯ ಸಂಘರ್ಷದ ಹಿನ್ನಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳನ್ನು ನಡೆಸುವ ಕುರಿತು ಅನಿಶ್ಚಿತತೆ ಎದುರಾಗಿದೆ. ಈ ಕುರಿತು ಬಿಸಿಸಿಐ ಇಂದು ನಿರ್ಧಾರ ಕೈಗೊಳ್ಳಲಿದೆ ಎಂದು ವರದಿಯಾಗಿದೆ. ಗುರುವಾರ ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು
ಅರ್ಧಕ್ಕೆ ರದ್ದುಗೊಳಿಸಲಾಯಿತು. ಭದ್ರತಾ ದೃಷ್ಠಿಯಿಂದ ಪಂದ್ಯವನ್ನು ರದ್ದುಗೊಳಿಸಲಾಯಿತು.ಇದರ ನಂತರ, ಐಪಿಎಲ್ 2025 ಪಂದ್ಯಾವಳಿಯ ಭವಿಷ್ಯವನ್ನು ಪರಿಗಣಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಭೆ ನಡೆಸಿತು. ಬಿಸಿಸಿಐ ಕೂಡ ಪಂದ್ಯಾವಳಿಯನ್ನು ನಿಲ್ಲಿಸುವ ಅಥವಾ ವೇಳಾಪಟ್ಟಿಯನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದೆ ಎನ್ನಲಾಗಿದೆ.
ನಾವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ, ಸರ್ಕಾರದೊಂದಿಗೆ ಸಮಾಲೋಚಿಸುತ್ತಿದ್ದೇವೆ ಇ.ದು ಐಪಿಎಲ್ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ.ಪರಿಸ್ಥಿತಿ ದಿನೇ ದಿನೇ ಬದಲಾಗುತ್ತಿದೆ. ನಮಗೆ ಏನು ಹೇಳುತ್ತಾರೋ ಅದನ್ನು ನಾವು ಮಾಡುತ್ತೇವೆ ಮತ್ತು ಎಲ್ಲಾ ಫ್ರಾಂಚೈಸಿಗೆ ತಿಳಿಸುತ್ತೇವೆ.