ನವದೆಹಲಿ: ಐಪಿಎಲ್ನ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ
ಬೃಹತ್ ಮೊತ್ತ ಚೇಸ್ ಮಾಡಿ ಗೆದ್ದ ಪಂಜಾಬ್ ಕಿಂಗ್ಸ್ ದಾಖಲೆ ನಿರ್ಮಿಸಿದೆ.ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ಸಿಡಿಸಿದ ಸ್ಫೋಟಕ ಶತಕದ ನೆರವಿನಿಂದ 20 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿತು.ಗುರಿ ಬೆನ್ನಟ್ಟಿದ ಪಂಜಾಬ್ 18.5ಓವರ್ಗಳಲ್ಲಿ
4 ವಿಕೆಟ್ ನಷ್ಟಕ್ಕೆ 265 ರನ್ ಗಳಿಸಿ 6 ವಿಕೆಟ್ಗಳ ದಾಖಲೆಯ ಗೆಲುವು ದಾಖಲಿಸಿತು. ಪಂಜಾಬ್ ಪ್ರಭ್ಸಿಮ್ರಾನ್ ಸಿಂಗ್ ಹಾಗೂ ನಾಯಕ ಶ್ರೇಯಸ್ ಬಿರುಸಿನ ಅರ್ಧ ಶತಕದ ನೆರವಿನಿಂದ ಗೆಲುವಿನ ನಗು ಬೀರಿತು. ಪ್ರಭ್ಸಿಮ್ರಾನ್ ಸಿಂಗ್ ಕೇವಲ 26 ಎಸೆತಗಳಲ್ಲಿ 9 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 76 ರನ್ ಸಿಡಿಸಿದರೆ,ಶ್ರೇಯಸ್ ಅಯ್ಯರ್ 36 ಎಸೆತಗಳಲ್ಲಿ 3 ಬೌಂಡರಿ ಹಾಗೂ 7 ಸಿಕ್ಸರ್ ನೆರವಿನಿಂದ ಅಜೇಯ 71ರನ್ ಸಿಡಿಸಿ ನಾಯಕನ ಆಟ ಪ್ರದರ್ಶಿಸಿದರು. ಪ್ರಿಯಾಂಶ್ ಆರ್ಯ 17 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 43 ರನ್ ಸೇರಿಸಿದರು. ನೇವಲ್ ವಧೇರ 15ಎಸೆತಗಳಲ್ಲಿ 3 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 25, ಶಶಾಂಕ್ ಸಿಂಗ್ 10 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 25 ರನ್ ಬಾರಿಸಿದರು. ಆರಂಭಿಕ ಜೋಡಿ ಪ್ರಭ್ಸಿಮ್ರಾನ್ ಸಿಂಗ್ ಹಾಗು ಪ್ರಿಯಾಂಶ್ ಆರ್ಯ 6.5 ಓವರ್ಗಳಲ್ಲಿ 126 ರನ್ ಸೇರಿಸಿ ಸ್ಪೋಟಕ ಆರಂಭ ಒದಗಿಸಿ ಭದ್ರ ಬುನಾದಿ ಹಾಕಿಕೊಟ್ಟರು.
ಇದಕ್ಕೂ ಮುನ್ನ ಕೆ.ಎಲ್ ರಾಹುಲ್ ಸ್ಪೋಟಕ ಶತಕ ಸಿಡಿಸಿ ಡೆಲ್ಲಿಯ ಬೃಹತ್ ಮೊತ್ತಕ್ಕೆ ಕಾರಣರಾದರು. ರಾಹುಲ್ ಕೇವಲ 67 ಎಸೆತಗಳಲ್ಲಿ16 ಬೌಂಡರಿ ಹಾಗೂ 9 ಸಿಕ್ಸರ್ ನೆರವಿನಿಂದ ಅಜೇಯ 152 ರನ್ ಸಿಡಿಸಿ ಹೊಸ ಮೈಲುಗಲ್ಲು ಸ್ಥಾಪಿಸಿದರು. ನಿತೀಶ್ ರಾಣಾ
44 ಎಸೆತಗಳಲ್ಲಿ 11 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 91 ರನ್ ಸಿಡಿಸಿದರು.ನಿತೀಶ್ ರಾಣಾ ಅವರೊಂದಿಗೆ ಎರಡನೇ ವಿಕೆಟ್ಗೆ 220 ರನ್ಗಳ ಅದ್ಭುತ ಜೊತೆಯಾಟವಾಡಿದ ರಾಹುಲ್, ತಂಡವು ಬೃಹತ್ ಮೊತ್ತ ಪೇರಿಸಲು ಬುನಾದಿ ಹಾಕಿಕೊಟ್ಟರು.












