ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಮೊದಲ 17 ದಿನಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆಗೊಳಿಸಿದೆ.ಮಾರ್ಚ್ 22ರಂದು ಚೆನ್ನೈಯಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ.ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೊದಲ ಹಂತದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಅವಧಿಯಲ್ಲಿ
10 ನಗರಗಳಲ್ಲಾಗಿ ಒಟ್ಟು 21 ಪಂದ್ಯಗಳು ನಡೆಯಲಿದೆ. ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ಮಾರ್ಚ್ 25ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್ಸಿಬಿ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ.