ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಸೆ.5ರಂದು ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಶಿಕ್ಷಕರ ಮನೋರಂಜನೆಗಾಗಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಮತ್ತು
ಮನೋರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು. ಈ ಕಾರ್ಯಕ್ರಮಕ್ಕೆ ಕೆವಿಜಿ ಐಪಿಎಸ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಊರುಬೈಲು ಮತ್ತು ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ. ವಿ ಅವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿಯನ್ನು ಹಾಕುವವರೇ ಶಿಕ್ಷಕರು. ವಿದ್ಯಾರ್ಥಿಗಳಲ್ಲಿ ಆದರ್ಶ ಗುಣವನ್ನು ಬೆಳೆಸಲು ಶಿಕ್ಷಕರ ಪಾತ್ರ ಮಹತ್ತರವಾದದ್ದು’ಎಂದು ಹೇಳಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್’ ಶಿಕ್ಷಕರೆಲ್ಲರೂ ಉತ್ತಮ ಶಿಕ್ಷಣ ಕೊಡುವಲ್ಲಿ ತಮ್ಮ ಕರ್ತವ್ಯಕ್ಕೆ ಬದ್ಧರಾಗಿ ಕಾರ್ಯನಿರ್ವಹಿಸಬೇಕು ‘ ಎಂದು ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಎಲ್ಲರಿಗೂ ಶಿಕ್ಷಕರ ದಿನಾಚರಣೆಯ ಶುಭ ಹಾರೈಸಿದರು.
ಇದರ ಜೊತೆಗೆ ಓಣಂ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಪ್ರಾಂಶುಪಾಲ ಅರುಣ್ ಕುಮಾರ್ ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ, ಓಣಂ ಆಚರಣೆಯ ಮಹತ್ವವನ್ನು ತಿಳಿಸಿದರು. ಬಳಿಕ 9ನೇ ತರಗತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರ ನೃತ್ಯ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗನ್ನು ನೀಡಿತ್ತು.
9 ಮತ್ತು ಹತ್ತನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕ ಶಿಕ್ಷಕೇತರ ವೃಂದದವರು ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು, ಪೂಕಳಂ ಅನ್ನು ಹಾಕಿ ಮನರಂಜಿಸಿದರು. ವಿದ್ಯಾರ್ಥಿಗಳಲ್ಲಿ ವಿವಿಧ ಹಬ್ಬಗಳ ಬಗ್ಗೆ ಅರಿವು ಮೂಡಿಸಲಾಯಿತು. ಶಿಕ್ಷಕ ವೃಂದ ಮತ್ತು ಶಿಕ್ಷಕೇತರ ವೃಂದ ದವರು ಉಪಸ್ಥಿತರಿದ್ದರು.