ವಾಷಿಂಗ್ಟನ್: ಅಮೆರಿಕ- ಇಸ್ರೇಲ್ ಜಂಟಿ ಕಾರ್ಯಾಚರಣೆಯಲ್ಲಿ ಇರಾನ್ನ
ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.ಡೊನಾಲ್ಡ್ ಟ್ರಂಪ್ ಮತ್ತು ಬೆಂಜಮಿನ್ ನೆತನ್ಯಾಹು ಹೇಳಿಕೆಯ ಬಳಿಕ
ಇದೀಗ ಇರಾನ್ ಮಾಧ್ಯಮಗಳು ವರದಿ ಮಾಡಿದೆ.
ಯುಎಸ್-ಇಸ್ರೇಲ್ ದಾಳಿಯಲ್ಲಿ ಕುಟುಂಬದ ಸದಸ್ಯರ ಸಾವು ದೃಢಪಡಿಸಿದ್ದ ಇರಾನ್ ಮಾಧ್ಯಮಗಳು, ಈಗ ತಮ್ಮ ಸರ್ವೋಚ್ಚ ನಾಯಕನ ಹತ್ಯೆಯನ್ನೂ ದೃಢಪಡಿಸಿವೆ.
ಇರಾನ್ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.ಟ್ರಂಪ್ ತನ್ನ ಸಾಮಾಜಿಕ ಜಾಲತಾಣ ‘ಟ್ರೂಥ್ ಸೋಶಿಯಲ್’ನಲ್ಲಿ ಬರೆದುಕೊಂಡಿದ್ದಾರೆ.








