ಟೆಹರಾನ್:ಪರಮಾಣು ಒಪ್ಪಂದದ ಮಾತುಕತೆಗೆ ಸ್ಪಂದಿಸದ ಇರಾನ್ ಮೇಲೆ ಅಮೆರಿಕ–ಇಸ್ರೇಲ್ ಜಂಟಿಯಾಗಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.ರಾಜಧಾನಿ ಟೆಹರಾನ್ನ ಜಮ್ಹೂರಿ, ಯೂನಿವರ್ಸಿಟಿ ಸ್ಟ್ರೀಟ್ ಮತ್ತು ಉತ್ತರ ಭಾಗದ ಸೈಯದ್ ಖಂದಾನ್ ಪ್ರದೇಶ, ಅಣುಶಕ್ತಿ ಸಂಶೋಧನಾ
ಕೇಂದ್ರವಿರುವ ಇಸ್ಫಹಾನ್ ಮತ್ತು ನಟಾಂಜ್, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಪ್ರಮುಖ ನೆಲೆಗಳು, ಬಂದರು ನಗರಿ ಬುಶೆಹರ್ ಸೇರಿದಂತೆ ಪ್ರಮುಖ ನಗರ ಮೇಲೆ ವೈಮಾನಿಕ ದಾಳಿ ನಡೆದಿದೆ.ಇಸ್ರೇಲ್ ರಾಜಧಾನಿ ಟೆಲ್ ಅವೀವ್ ಅನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಅಲ್ಲದೇ ಅಮೆರಿಕ ಮತ್ತು ಅದರ ಮಿತ್ರರಾಷ್ಟ್ರಗಳ ಮೂಲಸೌಕರ್ಯ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಪ್ರತೀಕಾರದ ದಾಳಿ ನಡೆಸಿದೆ ಎಂದು ವರದಿಯಾಗಿದೆ.








