ಪುತ್ತೂರು:ಕರ್ನಾಟಕ ಬ್ಯಾಂಕ್ ಕ್ಲರಿಕಲ್ ಹುದ್ದೆಗಳಿಗೆ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಉದ್ಯೋಗಕ್ಕೆ ಆಯ್ಕೆಗೊಂಡಿರುತ್ತಾರೆ. ಪುತ್ತೂರಿನ ಮಹೇಶ್ ಕೆ ಎಂ ಹಾಗೂ ಸುಳ್ಯದ ಶ್ರೀವತ್ಸ ಭಾರದ್ವಾಜ್ ಆಯ್ಕೆಯಾಗಿದ್ದಾರೆ. ಇವರು ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪ್ರವೇಶ
ಪರೀಕ್ಷಾ ತರಬೇತಿಯನ್ನು ಪಡೆದಿರುತ್ತಾರೆ.
ಉದ್ಯೋಗ ಮಾರ್ಗದರ್ಶನದೊಂದಿಗೆ ಗುಣಮಟ್ಟದ ತರಬೇತಿಗೆ ಹೆಸರುವಾಸಿಯಾದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯು 2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿದೆ. ಬ್ಯಾಂಕಿಂಗ್ ಕ್ಷೇತ್ರ, ಸಹಕಾರ ಕ್ಷೇತ್ರ, ಕೇಂದ್ರ ಹಾಗು ರಾಜ್ಯ ಸರಕಾರದ ಅಡಿಯಲ್ಲಿ ಬರುವ ಅನೇಕ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರಿಕ್ಷಾ ತರಬೇತಿ ನೀಡಲಾಗುತ್ತದೆ. ಸರಕಾರಿ ಹಾಗು ಖಾಸಗಿ ಉದ್ಯೋಗಗಳ ಮಾಹಿತಿಯನ್ನು ನಿರಂತರವಾಗಿ ಪ್ರತಿ ಉದ್ಯೋಗಾಕಾಂಕ್ಷಿಗಳಿಗೂ ತಿಳಿಸಲಾಗುತ್ತದೆ.
ಪ್ರತಿದಿನದ ಹಾಗು ವಾರಾಂತ್ಯದ ಬ್ಯಾಚುಗಳು ಲಭ್ಯವಿದ್ದು (ಆನ್ಲೈನ್/ ಆಫ್ಲೈನ್), ಆಸಕ್ತರು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ದೂರವಾಣಿ ಸಂಖ್ಯೆ 9632320477 / 9945988118 ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಕಟಣೆ ನೀಡಿದೆ.














