ಜೆರುಸಲೇಂ:ಹಮಾಸ್-ಪ್ಯಾಲೆಸ್ತೀನ್ ಸಂಘರ್ಷಕ್ಕೆ ಇಲ್ಲಿಯವರೆಗೆ 1,600 ಮಂದಿ ಬಲಿಯಾಗಿದ್ದಾರೆ.ಗಾಜಾ ಆರೋಗ್ಯ ಸಚಿವ ವಲಯ ಪ್ರಕಾರ, 143 ಮಕ್ಕಳು ಮತ್ತು 105 ಮಹಿಳೆಯರು ಸೇರಿದಂತೆ 704 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ಕು ದಿನಗಳ ಅವಧಿಯಲ್ಲಿ ದಾಳಿಯಲ್ಲಿ
4,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದಲ್ಲದೆ, ಹಮಾಸ್ ದಾಳಿಯಿಂದಾಗಿ ಇಸ್ರೇಲ್ನಲ್ಲಿ ಕನಿಷ್ಠ 900 ಜನರು ಸಾವನ್ನಪ್ಪಿದ್ದಾರೆ ಮತ್ತು 2,600 ಜನರು ಗಾಯಗೊಂಡಿದ್ದಾರೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹಮಾಸ್ ಭಯೋತ್ಪಾದಕ ಗುಂಪಿನ ಅಡಗುತಾಣಗಳನ್ನು ನಾಶಪಡಿಸುವುದಾಗಿ ಹೇಳಿದ್ದಾರೆ. ಈ ಮಧ್ಯೆ ಹಮಾಸ್ನ 1500 ಮಂದಿಯ ಮೃತದೇಹ ಪತ್ತೆ ಮಾಡಲಾಗಿದೆ ಎಂದು ಇಸ್ರೇಲ್ ಹೇಳಿದೆ. ಗಾಜಾದ ಮೇಲೆ ಇಸ್ರೇಲ್ ದಾಳಿ ಬಿಗಿ ಗೊಳಿಸಿದೆ.