ಮಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿ’ಸೋಜ ಅವರನ್ನು ಸಂಪಾಜೆ ವಲಯ ಕಾಂಗ್ರೆಸ್ ಪರವಾಗಿ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಅವರ ನೇತೃತ್ವದಲ್ಲಿ
ಅಭಿನಂದಿಸಲಾಯಿತು. ಈ ಸಂದರ್ಭ ಕೆ.ಪಿ.ಸಿ.ಸಿ.ಪ್ರಚಾರ ಸಮಿತಿ ಸಂಯೋಜಕರಾದ ಕೆ.ಪಿ.ಜಾನಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಎ.ಕೆ.ಇಬ್ರಾಹಿಂ ರವರು ಉಪಸ್ಥಿತರಿದ್ದರು.