ಐವರ್ನಾಡು: ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆಯವರು ಮಾ.31 ರಂದು ಸ್ವಯಂ ನಿವೃತ್ತಿಗೊಳ್ಳಲಿದ್ದು ಅವರಿಗೆ ಸಾರ್ವಜನಿಕ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮವು ಮಾ.26 ರಂದು ಸಂಘದ ಸಭಾ ಭವನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದ ಎಸ್.ಎನ್.ಮನ್ಮಥ ಅವರನ್ನು
ಸನ್ಮಾನಿಸಿ ಅಭಿನಂದಿಸಲಾಯಿತು.ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭ ಹಾರೈಸಿದರು. ಮಾಜಿ ಅಧ್ಯಕ್ಷರಾದ ಚಂದ್ರಕೋಲ್ಚಾರ್,ನೂಜಾಲು ಪದ್ಮನಾಭ ಗೌಡ, ಡಾ.ಬಾಲಸುಬ್ರಹ್ಮಣ್ಯ ಭಟ್ ಮಾತನಾಡಿ ಶುಭಹಾರೈಸಿದರು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ವಿಕ್ರಂ ಪೈ, ಡಿ.ಸಿ.ಸಿ.ಬ್ಯಾಂಕ್ ಮೇಲ್ವಿಚಾರಕ ಬಾಲಕೃಷ್ಣ ಪುತ್ಯ,ಸಂಘದ ಆಂತರಿಕ ಲೆಕ್ಕ ಪರಿಶೋಧಕ ಅನಂತಕೃಷ್ಣ ಚಾಕೋಟೆ,ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ಕುತ್ಯಾಡಿ, ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ಉಪಸ್ಥಿತರಿದ್ದರು. ಸಂಘದ ನಿರ್ದೇಶಕರಾದ ಕುಸುಮಾಧರ ಎಂ.ಸಿ,ಮಹೇಶ್ ಜೆ,ಭವಾನಿ ಎಂ.ಸಿ,ಸರಸ್ವತಿ ಕೆ, ಕೃಷ್ಣ ಬೆಳ್ಚಪ್ಪಾಡ,ಪುರಂದರ,ಚಂದ್ರಶೇಖರ ಎ.ಎಸ್,ವಾಸುದೇವ ಬಿ.ಕೆ, ಹಾಗೂ ಸಂಘದ ಸದಸ್ಯರು,ಸಿಬ್ಬಂದಿ ವರ್ಗದವರು,ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಘದ ನಿರ್ದೇಶಕರಾದ ದೇವಕಿ ಸಿ.ಜಿ.ಪ್ರಾರ್ಥಿಸಿ,ಸಹಾಯಕ ಕಾರ್ಯನಿರ್ವಹಣಾಧಿಕಾರಿ ದೀಕ್ಷಿತ್ ಸ್ವಾಗತಿಸಿ, ಸಿಬ್ಬಂದಿ ಅಜಿತ್ ನಿಡುಬೆ ಕಾರ್ಯಕ್ರಮ ನಿರೂಪಿಸಿ,ನಿರ್ದೇಶಕ ಸತೀಶ್ ಎಡಮಲೆ ವಂದಿಸಿದರು.