ಐವರ್ನಾಡು:ಗೆಳೆಯರ ಬಳಗ ಐವರ್ನಾಡು ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟಕ್ಕೆ ಅದ್ದೂರಿ ಚಾಲನೆ ದೊರೆತಿದೆ.
ಐವರ್ನಾಡು ಸರಕಾರಿ ಪದವಿ ಪೂರ್ವ ಕಾಲೇಜಿನ
ಮೈದಾನದ ಮ್ಯಾಟ್ ಅಂಕಣದಲ್ಲಿ ನಡೆಯುತ್ತಿರುವ ಪಂದ್ಯಾಟದ ಪ್ರಥಮ ಪಂದ್ಯದಲ್ಲಿ ಸುಳ್ಯದ ನೆಹರೂ ಸ್ಮಾರಕ ಮಹಾವಿದ್ಯಾಲಯ ತಂಡ ರೋಚಕ ಜಯ ದಾಖಲಿಸಿತು. ಬಿಷ್ಠ ಆಲ್ವಾಸ್ ಮೂಡಬಿದ್ರೆ ತಂಡವನ್ನು 32-31 ಅಂಕದ ಅಂತರದಲ್ಲಿ ಗೆದ್ದಿತು. ಆರಂಭದಲ್ಲಿ ಆಳ್ವಾಸ್ ತಂಡ ಭಾರೀ ಅಂತರದ ಮುನ್ನಡೆ ಸಾಧಿಸಿತ್ತು. ಅರ್ಧ ಸಮಯದ ಬಳಿಕ ತಿರುಗಿ ಬಿದ್ದ ಜಿದ್ದಾಜಿದ್ದಿನ ಹೋರಾಟ ನಡೆಸಿತು. ತೀವ್ರ ಪೈಪೋಟಿ ಕಂಡು ಬಂದ ಪಂದ್ಯದಲ್ಲಿ ಕೊನೆಯ ಕ್ಷಣದಲ್ಲಿ ಎನ್ಎಂಸಿ ಗೆದ್ದು ಬೀಗಿತು.