ಐವರ್ನಡು:ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ
ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಐವರ್ನಾಡು ಹಾಗೂ ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇದರ ಸಹಯೋಗದಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನೆನಪು ಹಾಗೂ ಭಾವಗಾನ ಕಾರ್ಯಕ್ರಮ ಐವರ್ನಾಡು ಸರಕಾರಿ
ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ರೇಖಾ ಯು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ಕುತ್ಯಾಡಿ ಉಪಸ್ಥಿತರಿದ್ದರು. ಲೀಲಾ ದಾಮೋದರ್ ಅವರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ಬಗ್ಗೆ ಮಾತನಾಡಿದರು. ಭಾವನಾ ಸುಗಮ ಸಂಗೀತ ಬಳಗದ ಸಂಚಾಲಕರಾದ ಕೆ ಆರ್ ಗೋಪಾಲಕೃಷ್ಣ ಇವರು ಭಾವಗಾನ ಕಾರ್ಯಕ್ರಮ ನಡೆಸಿಕೊಟ್ಟರು. ಸಭೆಯ ಅಧ್ಯಕ್ಷತೆಯನ್ನು ಕ ಸಾ ಪ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಇವರು ವಹಿಸಿದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತಡ್ಕ ಉಪಸ್ಥಿತರಿದ್ದರು. ಶಾಲಾ ಮುಖ್ಯಸ್ಥರಾದ ಸೂಫಿ ಪೆರಾಜೆ ಸ್ವಾಗತಿಸಿದರು. ತೇಜಸ್ವಿ ಕಡಪಳ ವಂದಿಸಿದರು. ಚಂದ್ರಮತಿ ಕೆ ಕಾರ್ಯಕ್ರಮ ನಿರೂಪಿಸಿದರು ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಸಿಎ ಗಣೇಶ್ ಭಟ್ ,ಚಂದ್ರಾವತಿ ಬಡ್ಡಡ್ಕ ,ಕೇಶವ ಸಿ ಎ,,ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











