ಸುಳ್ಯ: ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸಂಘದ ಸದಸ್ಯರ ಮಕ್ಕಳು ಈ ಬಾರಿಯ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು.
ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ಅವರು ಮಾತನಾಡಿ ಸಹಕಾರಿ ಸಂಘದ ವತಿಯಿಂದ
ಪ್ರತಿ ವರ್ಷದಂತೆ ಈ ವರ್ಷವೂ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಗ್ರಾಮದ ಸಂಘದ ಸದಸ್ಯರ ಮಕ್ಕಳಾದ 12 ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಿ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಹೇಳಿದರು.ಮನೆಯವರಿಗೂ ಶಾಲೆಗೂ ವಿದ್ಯಾರ್ಥಿಗಳು ಕೀರ್ತಿ ತಂದಿದ್ದಾರೆ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ದೀಕ್ಷಿತ್ ಎಂ., ನಿರ್ದೇಶಕರಾದ ವಾಸುದೇವ ಬೊಳುಬೈಲ್,ಮಹೇಶ ಜಬಳೆ, ಸರಸ್ವತಿ ಕೆ,ಚಂದ್ರಶೇಖರ ಎಸ್,ಕುಸುಮಾಧರ ಮಡ್ತಿಲ ,ವಿದ್ಯಾರ್ಥಿಗಳ ಪೋಷಕರು,ಮನೆಯವರು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.