ನವದೆಹಲಿ:ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಬಿಜೆಪಿಯಿಂದ ಟಿಕೆಟ್ ಸಿಗಲಿಲ್ಲ ಎಂಬ ಬೇಸರದಿಂದ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಮಧ್ಯಾಹ್ನ ಅಧಿಕೃತವಾಗಿ ಹೊಸದಿಲ್ಲಿಯಲ್ಲಿ ಬಿಜೆಪಿಗೆ ಮರು ಸೇರ್ಪಡೆಗೊಂಡಿದ್ದಾರೆ.ಪಕ್ಷದ ಕೇಂದ್ರ ಕಚೇರಿಯಲ್ಲಿ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್, ಭುಪೇಂದ್ರ ಯಾದವ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಹಿರಿಯ ಮುಖಂಡ ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ಬಿಜೆಪಿ ಸೇರ್ಪಡೆಯ ಬಗ್ಗೆ ಅಧಿಕೃತವಾಗಿ ಜಗದೀಶ್ ಶೆಟ್ಟರ್ ಘೋಷಣೆ ಮಾಡಿದ್ದಾರೆ.










