ಸುಳ್ಯ:ಯುವಜನತೆ ಭ್ರಷ್ಟಾಚಾರವನ್ನು ಪ್ರಶ್ನಿಸುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು, ಭ್ರಷ್ಟಾಚಾರದ ವಿರುದ್ಧ ಎಚ್ಚೆತ್ತುಕೊಂಡು ಸೆಟೆದು ನಿಲ್ಲಬೇಕು ಎಂದು ಲೋಕಾಯುಕ್ತ ಡಿವೈಎಸ್ ಪಿ ಡಾ. ಗಾನಾ ಪಿ ಕುಮಾರ್ ಹೇಳಿದರು.ಕರ್ನಾಟಕ ಲೋಕಾಯುಕ್ತ ಮಂಗಳೂರು ವತಿಯಿಂದ ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಜಾಗೃತಿ ಅರಿವು ಸಪ್ತಾಹ
ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ಅವರು ಮಾತನಾಡಿದರು. ಭ್ರಷ್ಟಾಚಾರವನ್ನು ತಡೆಗಟ್ಟಲು
ಕೇಂದ್ರ ಮತ್ತು ರಾಜ್ಯಗಳಲ್ಲಿ ಸ್ವಾಯತ್ತತಾ ತನಿಖಾ ಸಂಸ್ಥೆಗಳು ಇದ್ದು ರಾಜ್ಯದಲ್ಲಿ ಲೋಕಾಯುಕ್ತವು ಯಾವುದೇ ಭ್ರಷ್ಟಾಚಾರ, ಲಂಚದ ದೂರುಗಳು ಬಂದಾಗ ಅವುಗಳನ್ನು ಪರಿಶೀಲನೆ ನಡೆಸಿ ಕ್ರಮ ಜರುಗಿಸುತ್ತಿದೆ. ಇದರ ಬಗ್ಗೆ ಯುವ ಜನತೆಗೆ ಅರಿವು ಅಗತ್ಯವಾಗಿದೆ ಎಂದು ಹೇಳಿದರು.
ಬಳಿಕ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾ ವಿಧಿಯನ್ನು ಬೋದಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಲೋಕಾಯುಕ್ತ ನಿರೀಕ್ಷಕರಾದ ಸುರೇಶ್ ಕುಮಾರ್ ಪಿ. ಚಂದ್ರಶೇಖರ್ ಕೆ ಎನ್,ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಜಯಶ್ರೀ ಕೆ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ರಾಮಕೃಷ್ಣ ಕೆ ಎಸ್ , ಉಪಸ್ಥಿತರಿದ್ದರು.
ಪಂಚಮಿ ಸ್ವಾಗತಿಸಿ ದಿವ್ಯ ಜ್ಯೋತಿ ವಂದಿಸಿ ರಾಮಕೃಷ್ಣ ಕಾರ್ಯಕ್ರಮ ನಿರೂಪಿಸಿದರು .
ಇದೇ ಸಂದರ್ಭದಲ್ಲಿ ಭ್ರಷ್ಟಾಚಾರ ವಿರೋಧಿ ಜಾಗೃತಿ ಮೂಡಿಸುವ ಪ್ರಬಂಧ ಮತ್ತು ರೀಲ್ಸ್ ಗಳ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು.