ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾ ಅಕ್ಟೋಬರ್ 15ರಂದು ವಿಶ್ವದಾದ್ಯಂತ ಬಿಡುಗಡೆಗೊಂಡಿದೆ. ಅಭಿಮಾನಿಗಳು ಅದ್ದೂರಿ ಸಂಭ್ರಮಾಚರಣೆ ಮಾಡುವ ಮೂಲಕ ಸಿನಿಮಾವನ್ನು ಸ್ವಾಗತಿಸಿದ್ದಾರೆ.ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ‘ಜೈಲರ್ 2’ ಸಿನಿಮಾ ಈಗಾಗಲೇ ಮುಂಗಡ ಟಿಕೆಟ್ ಬುಕಿಂಗ್ ಮೂಲಕ
50 ಕೋಟಿ ಗಳಿಸಿದೆ. ಸಿನಿಮಾ ಬಿಡುಗಡೆಯಾದ ಮೊದಲ ದಿನ ವಿಶ್ವದಾದ್ಯಂತ ಸುಮಾರು 100 ಕೋಟಿ ಗಳಿಸುವ ನಿರೀಕ್ಷೆಯಿದೆ.
ಈ ಸಿನಿಮಾದಲ್ಲಿ ರಜನಿ ಜೊತೆಗೆ ಪ್ರಮುಖ ನಟರಾದ ವಿಜಯ್ ಸೇತುಪತಿ ಹಾಗೂ ಹೃತಿಕ್ ರೋಷನ್ ಅತಿಥಿ ಪಾತ್ರಗಳಲ್ಲಿ ನಟಿಸಿದ್ದಾರೆ. ಇದರೊಂದಿಗೆ

ಮೋಹನ್ಲಾಲ್, ಶಿವರಾಜ್ಕುಮಾರ್, ಜಾಕಿ ಶ್ರಾಫ್, ಮಿಥುನ್ ಚಕ್ರವರ್ತಿ, ಎಸ್.ಜೆ. ಸೂರ್ಯ, ವಿದ್ಯಾ ಬಾಲನ್, ರಮ್ಯಾ ಕೃಷ್ಣನ್ ಕೂಡ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ನಟ ರಜನಿಕಾಂತ್ ಅವರು ಮುತ್ತುವೇಲ್ ಪಾಂಡಿಯನ್ ಪಾತ್ರದಲ್ಲಿ ಅಬ್ಬರಿಸಿದ್ದಾರೆ. ಸಿನಿಮಾದಲ್ಲಿ ಬಾಲಿವುಡ್ ನಟ ಹೃತಿಕ್ ರೋಷನ್ ಅವರು ಖಡಕ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೋಹನ್ ಲಾಲ್ ಅವರು ವಿಂಟೇಜ್ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ.










