ಸುಳ್ಯ:ಹಿರಿಯ ಸಹಕಾರಿ ಜಾಕೆ ಮಾಧವ ಗೌಡರಿಗೆ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಲಭಿಸಿದೆ. ನ.14ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ
ಅನನ್ಯ ಸೇವೆ ಸಲ್ಲಿಸಿರುವ ಜಾಕೆ ಮಾಧವ ಗೌಡರು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಸುಳ್ಯ ಎಪಿಎಂಸಿ ಅಧ್ಯಕ್ಷರಾಗಿ, ಸುಳ್ಯ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ, ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷರಾಗಿ ಪಂಬೆತ್ತಾಡಿ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೇರಿ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸೇವೆ ಸಲ್ಲಿಸಿದ್ದಾರೆ.














