ಮಂಗಳೂರು:ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ನೆರವು ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಯಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವ ಬಿ.ಜಮೀರ್ ಅಹ್ಮದ್ ತಿಳಿಸಿದರು. ಬುಧವಾರ ಮಂಗಳೂರು ಪ್ರೆಸ್ ಕ್ಲಬ್ಗೆ ಭೇಟಿ ನೀಡಿ ಪತ್ರಕರ್ತರ ಜತೆ ಮಾತನಾಡಿದ ಅವರು ‘ ಪತ್ರಕರ್ತರ ಬೇಡಿಕೆಗಳಿಗೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಲಿದೆ ಎಂದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ
ವೈಯಕ್ತಿಕ ನೆಲೆಯಲ್ಲಿ 2 ಲಕ್ಷ ರೂ. ದೇಣಿಗೆ ನೀಡಿದ ಸಚಿವ ಜಮೀರ್ ಅಹ್ಮದ್ ಅವರು ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ನಿವೇಶನ ಒದಗಿಸಲು ಎಲ್ಲ ರೀತಿಯ ಪ್ರಯಯತ್ನ ನಡೆಸುವುದಾಗಿ ಭರವಸೆ ನೀಡಿದರು.ಎಂಎಲ್ಸಿ ಹರೀಶ್ ಕುಮಾರ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ , ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಅನ್ನು ಮಂಗಳೂರು, ರಾಜ್ಯ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ವತಿಯಿಂದ ಸಚಿವರನ್ನು ಹಾಗೂ ಅವರ ಮಾಧ್ಯಮ ಕಾರ್ಯದರ್ಶಿ
ಲಕ್ಷ್ಮೀನಾರಾಯಣ ಅವರನ್ನು ಗೌರವಿಸಲಾಯಿತು. ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಅರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.