ನವದೆಹಲಿ: ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆಗೆ ಚುನಾವಣೆ ಘೋಷಣೆ ಮಾಡಿದೆ. ಪತ್ರಿಕಾಗೋಷ್ಠಿ ನಡೆಸಿದ ಚುನಾವಣಾ ಆಯೋಗ ಮತದಾನ ಹಾಗೂ ಮತ ಎಣಿಕೆಯ ದಿನಾಂಕ ಪ್ರಕಟಿಸಿತು.ಜಮ್ಮು ಮತ್ತು ಕಾಶ್ಮೀರದ
90 ಸ್ಥಾನಗಳಿಗೆ ವಿಧಾನಸಭಾ ಚುನಾವಣೆ ನಡೆಯಲಿದೆ.ಈ ರಾಜ್ಯದಲ್ಲಿ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ.ಸೆಪ್ಟೆಂಬರ್ 18, 25 ಹಾಗೂ ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿತು. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ.ಹರಿಯಾಣ ರಾಜ್ಯದಲ್ಲಿ 90 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಅಕ್ಟೋಬರ್ 1ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ.