ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮೊದಲ ಹಂತದ ಮತದಾನ ಇಂದು ಆರಂಭಗೊಂಡಿದೆ. ಬುಧವಾರ ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ರ ತನಕನಡೆಯಲಿದೆ. ಮೊದಲ ಹಂತದಲ್ಲಿ 24 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಮೊದಲ ಹಂತದಲ್ಲಿ 7.14 ಲಕ್ಷಕ್ಕೂ ಹೆಚ್ಚು ಮತದಾರರು ಮತದಾನ ಮಾಡಲಿದ್ದಾರೆ.ಭಾರೀ ಭದ್ರತೆಯ
ನಡುವೆ ಚಿನಾಬ್ ಕಣಿವೆ ಜಿಲ್ಲೆಗಳಾದ ದೋಡಾ, ಕಿಸ್ತ್ವಾರ, ರಾಂಬನ್, ಅನಂತನಾಗ್, ಪುಲ್ವಾಮಾ, ಕುಲ್ಗಾಮ್ ಮತ್ತು ಶೋಪಿಯಾನ್ ಕ್ಷೇತ್ರಗಳಲ್ಲಿ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಒಂದು ದಶಕದ ಅವಧಿಯಲ್ಲಿ ಇಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವುದು ಇದೇ ಮೊದಲು. ಕಣಿವೆ ರಾಜ್ಯಕ್ಕೆ ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ನೀಡಿದ್ದ ವಿಶೇಷ ಸ್ಥಾನಮಾನ ವನ್ನು ಕೇಂದ್ರ ಸರ್ಕಾರವು 2019ರ ಆಗಸ್ಟ್ನಲ್ಲಿ ಹಿಂಪಡೆದು, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದು.ಕಾಂಗ್ರೆಸ್ ಪಕ್ಷವು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದೆ.ಜಮ್ಮು ಪ್ರದೇಶದಲ್ಲಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ಗುರಿ ಹೊಂದಿದೆ. 2014ರಲ್ಲಿ ನಡೆದ ವಿಧಾನಸಭಾ
ಎರಡನೆಯ ಹಾಗೂ ಮೂರನೆಯ ಹಂತದ ಮತದಾನವು ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ನಡೆಯಲಿದೆ. ಮತ ಎಣಿಕೆಯು ಅಕ್ಟೋಬರ್ 8ಕ್ಕೆ ನಿಗದಿಯಾಗಿದೆ.