ಶ್ರೀನಗರ:ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆಯ ಮೂರನೇ ಮತ್ತು ಅಂತಿಮ ಹಂತದ ಮತದಾನದ ಮಂಗಳವಾರ ಮುಕ್ತಾಯವಾಗಿದ್ದು, ಶೇ.65ಕ್ಕೂ ಹೆಚ್ಚು ಮತದಾನವಾಗಿದೆ.
ಆಯೋಗದ ಅಂಕಿಅಂಶಗಳ ಪ್ರಕಾರ ಇಂದು ನಡೆದ ಅಂತಿಮ ಹಂತದ ಚುನಾವಣೆಯಲ್ಲಿ
ಸಂಜೆ 5 ಗಂಟೆಯವರೆಗೆ ಶೇ. 65.48 ರಷ್ಟು ಮತದಾನವಾಗಿದೆ.
ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳ 40 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಗಿ ಭದ್ರತೆಯ ನಡುವೆ ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಯಿತು ಮತ್ತು ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದೆ.
ಇಂದು ನಡೆದ ಮೂರನೇ ಹಂತದ ಚುನಾವಣೆಯಲ್ಲಿ ಇಬ್ಬರು ಮಾಜಿ ಉಪಮುಖ್ಯಮಂತ್ರಿಗಳಾದ ತಾರಾ ಚಂದ್ ಮತ್ತು ಮುಜಾಫರ್ ಬೇಗ್ ಸೇರಿದಂತೆ 415 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.2019 ರ ಆಗಸ್ಟ್ನಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಮೊದಲ ಬಾರಿಗೆ ವಿಧಾನಸಭಾ ಚುನಾವಣೆ ನಡೆದಿದ್ದು.ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.