ಸುಳ್ಯ: ಜಮೀಯ್ಯತುಲ್ ಫಲಾಹ್ ಸುಳ್ಯ ತಾಲೂಕು ಘಟಕದ ವತಿಯಿಂದ 2024/ 2025ನೇ ಸಾಲಿನ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿ ವೇತನ ವಿತರಣೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮದ ಸುಳ್ಯದ
ಮುನವ್ವಿರುಲ್ ಇಸ್ಲಾಂ ಮದರಸ ಗಾಂಧಿನಗರ ದಲ್ಲಿ ಡಿ.7 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಜಮೀಯ್ಯತುಲ್ ಫಲಾಹ್ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಜಮೀಯ್ಯತುಲ್ ಫಲಾಹ್ ಅಧ್ಯಕ್ಷರಾದ ಕೆಎಂ ಅಬೂಬಕರ್ ಪಾರೆಕ್ಕಲ್ ವಹಿಸಲಿದ್ದಾರೆ. ಸಮಾರಂಭದಲ್ಲಿ ಪ್ರಮುಖರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.