ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ದ. ಕ. ಜಿಲ್ಲೆ-02, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ದ.ಕ ಜಿಲ್ಲೆ ಇದರ ವತಿಯಿಂದ ಗಾಂಧಿಸ್ಮೃತಿ ಕಾರ್ಯಕ್ರಮದ ಅಂಗವಾಗಿ ಸುಳ್ಯದಲ್ಲಿ ಬೃಹತ್ ಜನಜಾಗೃತಿ ಜಾಥಾ ಸುಳ್ಯದಲ್ಲಿ ನಡೆಯಿತು. ಸುಳ್ಯದ ಜ್ಯೋತಿ ವೃತ್ತದಿಂದ ಸಮಾವೇಶ ನಡೆಯುವ
ಅಮರಶ್ರೀಭಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದವರೆಗೆ ಜಾಗೃತಿ ಜಾಥಾ ನಡೆಯಿತು. ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗವಹಿಸಿದರು. ಕೊಂಬು ಕಹಳೆ, ವಾದ್ಯ ಮೇಳಗಳು, ಚೆಂಡೆ, ವಿವಿಧ ವೇಷಗಳು, ಸ್ತಬ್ದಚಿತ್ರಗಳು ಮೆರವಣಿಗೆಗೆ ಮೆರುಗು ನೀಡಿತು. ಸಮಾವೇಷ ನಡೆಯುವ ಅಮರಶ್ರೀಭಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನ ತುಂಬಿ ತುಳುಕಿದೆ. ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಹರಿದು ಬಂದಿದ್ದಾರೆ.ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ,
ಜಿಲ್ಲಾ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ್ ಅಮೆಚೂರು,ಸುಳ್ಯಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ,
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದ.ಕ.ಜಿಲ್ಲೆ 02ರ ನಿರ್ದೇಶಕ ಪ್ರವೀಣ್ ಕುಮಾರ್ಗ್ರಾಮಾಭಿವೃದ್ಧಿ ಯೋಜನೆಯ
ಯೋಜನಾಧಿಕಾರಿ ನಾಗೇಶ್ ಪಿ, ಮಹೇಶ್ ಕುಮಾರ್ ರೈ ಮೇನಾಲ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು