ಸುಳ್ಯ:ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ವಿಶ್ವನಾಥ ರೈ ಕಳಂಜ ಆಯ್ಕೆಯಾಗಿದ್ದಾರೆ.ಪುತ್ತೂರು ಶ್ರೀ ಮಹಾಲಿಂಗೇಶ್ವರ ಸಭಾಂಗಣದಲ್ಲಿ ನಡೆದ ಜಿಲ್ಲಾ ಜನಜಾಗೃತಿ ಪದಾಧಿಕಾರಿಗಳ ಸಭೆಯಲ್ಲಿ ಆಯ್ಕೆ ನಡೆಯಿತು. ಸಭೆಯಲ್ಲಿ
ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ, ರಾಜ್ಯ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯಸ್, ಮಾಜಿ ಜಿಲ್ಲಾಧ್ಯಕ್ಷ ಎನ್.ಎ. ರಾಮಚಂದ್ರ , ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ಅಧ್ಯಕ್ಷರಾದ ಸತೀಶ್ ನಾಯ್ಕ , ಪ್ರಾದೇಶಿಕ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮತ್ತಿತರರು ಇದ್ದರು.







