ಸುಳ್ಯ:ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಪದಾಧಿಕಾರಿಗಳ ಸಭೆ ಮತ್ತು ಸುಜ್ಞಾನ ನಿಧಿ ಶಿಷ್ಯ ವೇತನ ಹಾಗೂ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರಗಳ ವಿತರಣಾ ಕಾರ್ಯಕ್ರಮ ಯೋಜನಾ ಕಛೇರಿ ಸಭಾಂಗಣದಲ್ಲಿ ನಡೆಯಿತು.
ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅಥಿತಿಗಳಾಗಿ
ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಎಂ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಲೋಕನಾಥ್ ಅಮೆಚೂರು ವಹಿಸಿದ್ದರು. ಪ್ರಗತಿಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಪಿ.ಸಿ.ಬಿಯರಾಮ, ವಿಮಲಾ ರಂಗಯ್ಯ ವಿಶ್ವನಾಥ ರೈ ಕಳಂಜ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ ಉಪಸ್ಥಿತರಿದ್ದರು.

ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ತಾಲೂಕಿನ 117 ವಿಧ್ಯಾರ್ಥಿಗಳಿಗೆ ಶಿಷ್ಯ ವೇತನ ಹಾಗೂ ತಾಲೂಕಿನ 10 ಜನ ಶಿಕ್ಷಕರಿಗೆ ಯೋಜನೆಯ ನೇಮಕಾತಿ ಪತ್ರವನ್ನು ಶಾಸಕಿ ಭಾಗೀರಥಿ ಮುರುಳ್ಯ ವಿತರಿಸಿದರು.ತಾಲೂಕಿನಲ್ಲಿ ಸುಮಾರು 167 ಹಿಂದು ಮಂದಿರ ದೇಗುಲಗಳ ಅಭಿವೃದ್ಧಿಗೆ ಸುಮಾರು 2 ಕೋಟಿಗೂ ಅಧಿಕ ಮೊತ್ತವನ್ನು ನೀಡಲಾಗಿದೆ ಜೊತೆಗೆ ಹಿಂದು ರುದ್ರ ಭೂಮಿ , ಹಾಲು ಉತ್ಪಾದಕರ ಸಂಘದ ಕಟ್ಟಡ , ಕೆರೆ ಅಭಿವೃದ್ಧಿ ಸೇರಿದಂತೆ ಇತರೆ ಅಭಿವೃದ್ಧಿ ಕೆಲಸಗಳಿಗೆ ಸುಮಾರು 2 ಕೋಟಿಗು ಅಧಿಕ ಮೊತ್ತವನ್ನು ನೀಡಲಾಗಿದೆ ಎಂದು ಯೋಜನಾಧಿಕಾರಿ ಮಾಧವ ಗೌಡ ತಿಳಿಸಿದರು.





